Follow Us On

Google News
Focus News
Trending

ಹಿಂಸಾತ್ಮಕವಾಗಿ ಅಕ್ರಮವಾಗಿ ಜಾನುವಾರು ಸಾಗಾಟ:ಇಬ್ಬರ ಬಂಧನ

ಮುoಡಗೋಡ : ಯಾವುದೇ ಪರವಾನಿಗೆಯಿಲ್ಲದೇ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ದಾಂಡೇಲಿಯ ಗ್ರಾಮೀಣ ಪೋಲೀಸರು ಬಂಧಿಸಿದ್ದಾರೆ. ಚೆಕ್ ಪೋಸ್ಟ್ ನಲ್ಲಿ ಗಸ್ತಿನ ವೇಳೆ ಹರೇಗಾಳಿಯಿಂದ ದಾಂಡೇಲಿ ಕಡೆಗೆ ಸಾಗುತ್ತಿದ್ದ ವೇಳೆ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಎರಡು ಹೋರಿ ಹಾಗು ಕೋಣವೊಂದನ್ನು ತುಂಬಿಕೊoಡು ಬಂದ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ದಾಖಲೆಗಳಿಲ್ಲದೆ ಇರುವುದು ತಿಳಿದು ಬಂದಿದೆ. ಈ ವೇಳೆ ಪೋಲೀಸರು ಆರೋಪಿಗಳನ್ನು ವಾಹನ ಸಮೇತ ಬಂಧಿಸಿದ್ದಾರೆ.

ಬಂಧಿತರಿoದ ಆರೋಪಿಗಳಿಂದ ಸುಮಾರು ಒಂದುವರೆ ಲಕ್ಷ ಮೌಲ್ಯದ ಅಶೋಲ್ ಲೇಲ್ಯಾಂಡ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ದಾಂಡೇಲಿ ಸುಭಾಶನಗರ ನಿವಾಸಿ ಗೌಸಲ್ಲಾ ಅಜಾಮ್ ಬರಕತ್ ಮಹಮದ್ ಅನಿಸ್ ದೇಸಾಯಿ(34) ಹಾಗು ಬಾಬಾ ಸಾಬ್ ಸನದಿ(42) ಎಂದು ಗುರುತಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button