Focus News
Trending

ಜಲದಿಗ್ಬಂಧನದ ನಡುವೆ ಹೆರಿಗೆ ನೋವು; ಗರ್ಭಿಣಿಯನ್ನು ಬೋಟ್ ಮೂಲಕ ದಾಟಿಸಿದ ಯುವಕರು

ಕಾರವಾರ: ಜಲದಿಗ್ಬಂಧನದ ನಡುವೆ ಹೆರಿಗೆ ನೋವು ಕಾಣಿಸಿಕೊಂಡು ಸಂಕಷ್ಟಕ್ಕೆ ಸಿಲುಕಿದ್ದ  ಗರ್ಭೀಣಿಯೋರ್ವಳನ್ನು ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸ್ಥಳೀಯ ಯುವಕರು ಬೋಟ್ ಮೂಲಕ ಸುರಕ್ಷಿತವಾಗಿ ಆಸ್ಪತ್ರೆಗೆ ಸಾಗಿಸಲು ನೆರವಾದ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯ ಮೌಳಂಗಿಯಲ್ಲಿ ನಡೆದಿದೆ. ಮೌಳಂಗಿ ಗ್ರಾಮದ ನಿವಾಸಿ ಭೂಮಿಕಾ ಕಾಂಬ್ಳೆ ಹೆರಿಗೆ ನೋವು ಕಾಣಿಸಿಕೊಂಡು ಜಲದಿಗ್ಬಂಧನಕ್ಕೊಳಗಾದವರು.

ವರುಣನ ಅಬ್ಬರದಿಂದಾಗಿ ದಾಂಡೇಲಿಯ ಮೌಳಂಗಿ ರಸ್ತೆ ಜಲಾವೃತಗೊಂಡ ಹಿನ್ನೆಲೆಯಲ್ಲಿ ಸಂಚಾರ ಬಂದಾಗಿತ್ತು. ಆದರೆ ಇದೇ ಸಮಯದಲ್ಲಿ ಗರ್ಭೀಣಿ ಭೂಮಿಕಾ ಕಾಂಬ್ಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ರಸ್ತೆ ಸಂಪೂರ್ಣ ಜಲಾವೃತವಾದ ಕಾರಣ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವುದು ಸಾಧ್ಯವಿಲ್ಲದ ಕಾರಣ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯರ ಯುವಕರು ನೆರವಿಗೆ ದಾವಿಸಿದ್ದರು.

ಮೌಳಂಗಿ ಇಕೋ ಪಾರ್ಕ್ ನ ಟ್ಯೂಬ್ ಬೋಟ್ ಸಹಾಯದಿಂದ ಗರ್ಭಿಣಿ ಮಹಿಳೆಯನ್ನು ನೆರೆಯಿಂದ ಪಾರು ಮಾಡಿ ಬಳಿಕ ಕಾರಿನ ಮೂಲಕ ದಾಂಡೇಲಿಯ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಸೆರಿಸಿ ಮಾನವೀಯತೆ ಮೆರೆದಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕಾರವಾರ

Back to top button