ಒಲೆಗೆ ಹಾಕಿದ ಸೀಮೆಎಣ್ಣೆಯಿಂದಾಗಿ ಇಡೀ ಮನೆಗೆ ಹೊತ್ತಿಕೊಂಡ ಬೆಂಕಿ: ಮಹಿಳೆಗೂ ಗಂಭೀರ ಗಾಯ

ಕಾರವಾರ: ಅಡುಗೆ ಮಾಡುವಾಗ ಅವಾಂತರವಾಗಿದ್ದು, ಸೀಮೆ ಎಣ್ಣೆಯಿಂದ ಬೆಂಕಿ ತಗುಲಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಕಾರವಾರದಲ್ಲಿ ನಡೆದಿದೆ. ಮಹಿಳೆ ಅಡುಗೆ ಮಾಡಲು ಅಡುಗೆ ಕೋಣೆಗೆ ತೆರಳಿದ್ದು, ಈ ವೇಳೆ ಒಲೆಗೆ ಬೆಂಕಿ ಹಚ್ಚಲು ಸೀಮೆ ಎಣ್ಣೆಹಾಕಿದ್ದಾಳೆ.

ಈ ಸಂದರ್ಭದಲ್ಲಿ ಮಹಿಳೆಯ ಗಮನಕ್ಕೆ ಬಾರದೆ ಅಲ್ಲದೆ ಪಕ್ಕದಲ್ಲಿ ಇದ್ದ ಸೀಮೆ ಎಣ್ಣೆ ಕ್ಯಾನಿಗೆ ಬೆಂಕಿ ತುಗುಲಿದ್ದು, ಮಹಿಳೆ ಕಾಲಿಗೂ ಬೆಂಕಿ ಹೊತ್ತಿಕೊಂಡಿದೆ. ಅಲ್ಲದೆ, ಮನೆಗೂ ಬೆಂಕಿ ಆವರಿಸಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾಳೆ.

https://vismaya24x7.com/wp-content/uploads/2021/07/bani.mp4

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮಹಿಳೆಯನ್ನು ಸೀತಾರ ಕಳಸ ಎಂದು ಗುರುತಿಸಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Exit mobile version