ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಮೋಸ: ವ್ಯಕ್ತಿಯ ಖಾತೆಯಿಂದ 2 ಲಕ್ಷದ 91 ಸಾವಿರ ರೂಪಾಯಿ ಹಣ ವರ್ಗಾವಣೆ

ಶಿರಸಿ: ಎಲ್ಲಿಯವರೆಗೆ ಮೋಸ ಹೋಗುವವರು ಇರುತ್ತಾರೋ ಅಲ್ಲಿಯ ವರೆಗೆ ಮೋಸ ಮಾಡುವವರೂ ಇದ್ದೆ ಇರುತ್ತಾರೆ. ಹೌದು, ಬ್ಯಾಂಕ್ ಖಾತೆಗೆ ಕೆವೈಸಿ ಅಪಡೇಟ್ ಮಾಡಬೇಕೆಂದು ನಂಬಿಸಿ ವ್ಯಕ್ತಿಯೋರ್ವ ಖಾತೆಯಿಂದ ಹಣ ಎಗರಿಸಿದ ಘಟನೆ ತಾಲೂಕಿನಲ್ಲಿದೆ ನಡೆದಿದೆ. ವ್ಯಕ್ತಿಯನ್ನು ನಂಬಿಸಿ ಒಟ್ಟು 2 ಲಕ್ಷದ 91 ಸಾವಿರ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡು ವಂಚಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಲೂಕಿನ ಪುಟ್ಟನಮನೆ ನಿವಾಸಿ ಪರಮೇಶ್ವರ ಅನಂತ ಭಟ್ಟ ಮೋಸ ಹೋದ ವ್ಯಕ್ತಿ. ನಾನು ಎಸ್ ಬಿಐ ಅಧಿಕಾರಿ. ನಿಮ್ಮ ಖಾತೆಯ ಕೆವೈಸಿ ಅಪ್ಡೇಟ್ ಮಾಡಬೇಕು. ಇಲ್ಲದಿದ್ರೆ ನಿಮ್ಮ ಖಾತೆ ಬ್ಲಾಕ್ ಆಗುತ್ತದೆ ಎಂದು ಹೆದರಿಸಿ, ಓಟಿಪಿ ಪಡೆದು ಮೋಸ ಮಾಡಲಾಗಿದೆ.
ತಾನು ಬ್ಯಾಂಕ್ ಅಧಿಕಾರಿ ಎಂದು ಹೇಳಿದ ವ್ಯಕ್ತಿಯ ಮಾತನ್ನು ನಂಬಿದ ಪರಮೇಶ್ವರ ಭಟ್ಟ ಅವರು ತಮ್ಮ ಬ್ಯಾಂಕ್ ಖಾತೆ ನಂಬರ್ ನೀಡಿದ್ದಾರೆ. ಅಲ್ಲದೆ, ಓಟಿಪಿ ನಂಬರ್ ಕೂಡಾ ಕೊಟ್ಟಿದ್ದಾರೆ. ಬಳಿಕ ಬ್ಯಾಂಕ್ ಖಾತೆ ಪರಿಶೀಲನೆ ನಡೆಸಿದಾಗ ಮೋಸ ಹೋಗಿರುವುದು ತಿಳಿದುಬಂದಿದೆ.
ವಿಸ್ಮಯ ನ್ಯೂಸ್, ಶಿರಸಿ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
ಇಂದಿನ ಪ್ರಮುಖ ಸುದ್ದಿಗಳ ಲಿಂಕ್ ಇಲ್ಲಿದೆ
- ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಶಾಸಕ ದಿನಕರ ಶೆಟ್ಟಿಗೆ ಅನಂತಮೂರ್ತಿ ಮನವಿ
- ದನ ತಪ್ಪಿಸಲು ಹೋಗಿ ಪಲ್ಟಿಯಾದ ಆಟೋ: ಚಾಲಕ ಸಾವು
- ಹಣಕಾಸಿನ ವಿಷಯಕ್ಕೆ ಜಗಳ: ಆಟೋದ ಮೇಲೆ ಟಿಪ್ಪರ್ ಹಾಯಿಸಿ ಓರ್ವನ ಕೊಲೆ
- ಮಾದನಗೇರಿಯ ಶ್ರೀ ಮಹಾಲಸಾ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಕಾರ್ತಿಕ ಸಂಕಷ್ಟಿ, ಗಣಹವನ
- ಬೇಕರಿ ಎದುರು ನಿಲ್ಲಿಸಿಟ್ಟ ಬೈಕ್ ಕದ್ದ ಕಳ್ಳನ ಬಂಧನ
