ಹೊನ್ನಾವರ: 48 ಗಂಟೆಯಲ್ಲಿ ಮೀನುಗಾರರಿಗೆ ವ್ಯಾಕ್ಸಿನ್ ವ್ಯವಸ್ಥೆ ಮಾಡಿದ್ದೇವೆ ಇದು ನಮ್ಮ ಬಿಜೆಪಿ ಪಕ್ಷದ ತಾಕತ್ತು ನಮ್ಮ ಬಿಜೆಪಿ ಸರಕಾರ ಜನಪ್ರಿಯ ಕೆಲಸಗಳನ್ನು ಮಾಡುತ್ತಿದೆ. ಬಿಜೆಪಿ ಸರಕಾರ ಮಾಡಿದ ಕೆಲಸವನ್ನು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು ಹೊನ್ನಾವರ ಪಟ್ಟಣದಲ್ಲಿ ಇತ್ತಿಚೆಗೆ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದರು.
ಮುಖ್ಯ ಮಂತ್ರಿಗಳು ಜಿಲ್ಲೆಗೆ ಬಂದಾಗ ಮೀನುಗಾರರು ನಮ್ಮ ಪಕ್ಷದ ಬೆಂಬಲಿಗರು ಮೀನುಗಾರರಿಗೆ ಬೇರೆ ಜಿಲ್ಲೆ ಮತ್ತು ಬೇರೆ ರಾಜ್ಯಕ್ಕೆ ಮೀನುಗಾರಿಕೆ ಕೆಲಸಕ್ಕೆ ಹೋಗಲು ವ್ಯಾಕ್ಸಿನ್ ತೆಗೆದುಕೊಳ್ಳದೆ ಇರುವುದರಿಂದ ತೊಂದರೆಯಾಗುತ್ತಿದೆ. ಅವರಿಗೆ ವ್ಯಾಕ್ಸಿನ್ ವ್ಯವಸ್ಥೆ ಆಗಬೇಕು ಎಂದು ವಿನಂತಿ ಮಾಡಿಕೊಂಡಿದ್ದೆ. ©Copyright reserved by Vismaya tv. ಮುಖ್ಯ ಮಂತ್ರಿಗಳು ಅದೇ ಸ್ಥಳದಲ್ಲೇ ಸಂಬoಧ ಪಟ್ಟ ಅಧಿಕಾರಿಗಳಿಗೆ ಆದೇಶ ಮಾಡಿ 48 ಗಂಟೆಯಲ್ಲಿ ಮೀನುಗಾರರಿಗೆ ವ್ಯಾಕ್ಸಿನ್ ವ್ಯವಸ್ಥೆ ಮಾಡಿದ್ದಾರೆ. ಅದರ ಫಲವಾಗಿ ಕುಮಟಾ, ಹೊನ್ನಾವರ, ಭಟ್ಕಳದಲ್ಲಿ ಶನಿವಾರ ಮೀನುಗಾರರಿಗೆ ವ್ಯಾಕ್ಸಿನ್ ನೀಡಲು ಪ್ರಾರಂಭ ಮಾಡಲಾಗಿದೆ ಇದು ಬಿಜೆಪಿ ಸರಕಾರ ತಾಕತ್ತು. ಯಾವಾಗಲು ಬಿಜೆಪಿ ಜನರ ಪರವಾಗಿದೆ. ಬಿಜೆಪಿ ಪಕ್ಷ ಮಾಡುತ್ತಿರುವ ಕೆಲಸವನ್ನು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ ಎಂದರು.
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ನನ್ನ ಅತಿ ಆತ್ಮೀಯರು, ನಾನು ಪದೇ ಪದೇ ಹೇಳುತ್ತಿದ್ದ ಬಸವರಾಜ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು, ಅದು ಈಗ ನಿಜ ಆಗಿದೆ ಎಂದರು. ಮುಖ್ಯಮಂತ್ರಿಗಳು ಕ್ರಿಯಾಶೀಲರಾಗಿದ್ದಾರೆ. ಅವರ ಅವಧಿಯಲ್ಲಿ ಸಾಕಷ್ಟು ಅನುದಾನವನ್ನು ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದರು.
- KSRTC ಬಸ್ ಡಿಕ್ಕಿ: ಆಸ್ಪತ್ರೆಗೆ ಬರುತ್ತಿದ್ದ ಕಾರಿನಲ್ಲಿದ್ದ ಗಂಡ ಸಾವು, ಹೆಂಡತಿ ಗಂಭೀರ
- ನಾಯಿ ಹೊತ್ತೊಯ್ಯಲು ಬಂದು ಬಾವಿಗೆ ಬಿದ್ದ ಚಿರತೆ!
- ಬಡತನದಲ್ಲಿ ಅರಳಿದ ಪ್ರತಿಭೆ: ವಾಲಿಬಾಲ್ ನಲ್ಲಿ ಮಿಂಚು ಹರಿಸುತ್ತಿದ್ದಾರೆ ಗಿರೀಶ
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.