
ಗೋಕರ್ಣ: ಪ್ರವಾಸಕ್ಕೆ ಆಗಮಿಸುವ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಷ್ಟೆ ಎಚ್ಚರಿಕೆ ನೀಡುತ್ತಿದ್ದರೂ, ಈ ಎಚ್ಚರಿಕೆಯನ್ನು ಧಿಕ್ಕರಿಸಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೌದು, ಗೋಕರ್ಣದ ಪ್ಯಾರಡೈಸ್ ಬೀಚ್ ನಲ್ಲಿ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವಕ , ಈಜಲು ತೆರಳಿದ ವೇಳೆ ನೀರಿನ ಸುಳಿಗೆ ಸಿಲುಕಿ ಶವವಾಗಿ ಮರಳಿದ್ದಾನೆ.

ಅದ್ವೈತ್ ಜೈನ್ ಮೃತ ಯುವಕ ಎಂದು ತಿಳಿದುಬಂದಿದೆ.ಈತ ಮುಂಬೈಯಿಂದ ಆರು ಜನ ಸ್ನೇಹಿತರೊಂದಿಗೆ ಗೋಕರ್ಣಕ್ಕೆ ಬಂದಿದ್ದ. ಈಜಲು ಸ್ನೇಹಿತರೊಂದಿಗೆ ತೆರಳಿದ್ದಾಗ ಸಮುದ್ರದ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಗೋಕರ್ಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಸ್ಮಯ ನ್ಯೂಸ್ ಗೋಕರ್ಣ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ವಿದ್ಯುತ್ ತಂತಿ ತುಂಡಾಗಿ ಬಿದ್ದು ಮನೆಗೆ ತೆರಳುತ್ತಿದ್ದ ಯುವಕ ದುರ್ಮರಣ
- ಅಂಗಡಿಗೆ ಬಂದು ಸಾಮಾನು ಖರೀದಿಸುವ ನೆಪ ಮಾಡಿಕೊಂಡು ಮಹಿಳೆಯ ಮಾಂಗಲ್ಯಸರ ದೋಚಿದ ದುಷ್ಕರ್ಮಿಗಳು
- ಮಳೆ ಅವಾಂತರ: ಮಣ್ಣಿನ ರಾಶಿಗೆ ನುಗ್ಗಿದ ಸಾರಿಗೆ ಬಸ್
- ರಾಜ್ಯದಾದ್ಯಂತ ಪೂರ್ವ ಮುಂಗಾರು ಮಳೆಯ ಅಬ್ಬರ : ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ