ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ: ದೇವಸ್ಥಾನದಲ್ಲಿ ಸೇವೆಗೆ ಅವಕಾಶವಿಲ್ಲ: ಮದುವೆಗೂ ಹಲವು ನಿರ್ಬಂಧ

ಕಾರವಾರ: ಉತ್ತರಕನ್ನಡದಲ್ಲಿ ದಿನೇ ದಿನೇ ಕೋವಿಡ್ ಸೋಂಕು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, 3ನೇ ಅಲೆ ತಡೆಯಲು ಹಲವು ಮಹತ್ವದ ಮುಂಜಾಗೃತಾ ಕ್ರಮಗಳನ್ನು ಜಾರಿಗೊಳಿಸಿ, ಆದೇಶ ನೀಡಿದೆ. ಮುಖ್ಯವಾಗಿ ದೇವಸ್ಥಾನ ಮತ್ತು ಇತರೆ ಧಾರ್ಮಿಕ ಸ್ಥಳದಲ್ಲಿ ಸೇವಾ ಕಾರ್ಯಗಳಿಗೆ ಅವಕಾಶವಿರುವುದಿಲ್ಲ. ಕೇವಲ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಮದುವೆ ಕಾರ್ಯಕ್ರಮಗಳಿಗೆ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಮದುವೆ ಸಂಬoಧಿತ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಅನುಮತಿ ಕಡ್ಡಾಯಮಾಡಲಾಗಿದೆ. ಜಿಲ್ಲೆಯ ಪ್ರವಾಸಿ ತಾಣಗಳು ಮತ್ತು ಬೀಚ್‌ಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸತಕ್ಕದ್ದು, ಇಬ್ಬರು ಪೊಲೀಸ್ ಸಿಬ್ಬಂದಿ ನಿಯೋಜಿಸಲು ಸೂಚಿಸಲಾಗಿದೆ. ಈ ಕುರಿತ ವಿವರವಾದ ಮಾಹಿತಿ ಇಲ್ಲಿದೆ ನೋಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version