Follow Us On

WhatsApp Group
Important
Trending

ಬ್ರೇಕಿಂಗ್ ನ್ಯೂಸ್: ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇಂದಿನಿoದಲೇ ವೀಕೆಂಡ್ ಕರ್ಫ್ಯೂ ಜಾರಿ

ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಅನ್ನು ಇಂದಿನಿoದಲೇ ಜಾರಿಯಾಗಲಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಈ ಆದೇಶ ಹೊರಡಿಸಿದ್ದಾರೆ. ಕೋವಿಡ್ ನಿಯಂತ್ರಣ ಸಂಬoಧ ಸಿಎಂ ಬೊಮ್ಮಾಯಿ ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಮುಖ್ಯವಾಗಿ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಬೆಳಗಾವಿ, ಬೀದರ್, ಕೊಡಗು, ಕಲುಬುರಗಿ, ವಿಜಯಪುರದಲ್ಲಿ ಶನಿವಾರ, ಭಾನುವಾರ ಲಾಕ್ ಡೌನ್ ಘೋಷಿಸಲಾಗಿದೆ..ಅಲ್ಲದೆ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಅವಧಿಯನ್ನು ಹೆಚ್ಚಿಸಲಾಗಿದ್ದು, ರಾತ್ರಿ 10ರ ಬದಲಾಗಿ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಇರಲಿದೆ.

ಸದ್ಯಕ್ಕೆ ಉತ್ತರಕನ್ನಡ ಜಿಲ್ಲೆಯ ಹೆಸರು ಈ ಪಟ್ಟಿಯಲ್ಲಿ ಇಲ್ಲ. ಆದರೆ, ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿದರೆ ಆತಂಕ ತಪ್ಪಿದ್ದಲ್ಲ. ಅಲ್ಲದೆ, ರಾಜ್ಯದಲ್ಲಿ ಮತ್ತೆ ಕೋವಿಡ್ ನಿಧಾನವಾಗಿ ಹೆಚ್ಚುತ್ತಿದ್ದು, ಇದರೊಂದಿಗೆ ಮತ್ತೆ ಲಾಕ್ ಡೌನ್ ಭಯ ಜನರನ್ನು ಕಾಡುತ್ತಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button