ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆಯನ್ನು ಅಧಿಕೃತವಾಗಿ ಮಾಡಲಾಗಿದೆ. ಹೆಚ್ಚು ಬೇಡಿಕೆ ಪಡೆದುಕೊಂಡಿದ್ದ ಬೆಂಗಳೂರು ನಗರ ಅಭಿವೃದ್ಧಿ ಖಾತೆಯನ್ನು ಬೊಮ್ಮಾಯಿ ಅವರು ತಮ್ಮ ಬಳಿಯಲ್ಲಿಯೇ ಇರಿಸಿಕೊಂಡಿದ್ದಾರೆ. ಹಲವರ ಖಾತೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಕೆಲವರಿಗೆ ಈ ಮೊದಲೇ ನೀಡಿದ್ದ ಖಾತೆಯನ್ನು ನೀಡಲಾಗಿದೆ. ಖಾತೆ ಹಂಚಿಕೆ ಪಟ್ಟಿ ಈ ಕೆಳಗಿನಂತಿದೆ.
ಸಿಎo ಬಸವರಾಜ ಬೊಮ್ಮಾಯಿ – ಆರ್ಥಿಕ ಇಲಾಖೆ, ಗುಪ್ತಚರ ಇಲಾಖೆ, ಸಂಸದೀಯ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ
ಆರ್ ಅಶೋಕ್ – ಕಂದಾಯ
ಸುನಿಲ್ ಕುಮಾರ್ – ಇಂಧನ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ
ಗೋವಿoದ ಕಾರಜೋಳ – ಬೃಹತ್ ನೀರಾವರಿ ಇಲಾಖೆ
ಅರಗ ಜ್ಞಾನೇಂದ್ರ – ಗೃಹ ಇಲಾಖೆ
ಬಿ.ಸಿ.ಪಾಟೀಲ್ -ಕೃಷಿ ಇಲಾಖೆ
ಅಶ್ವಥ ನಾರಾಯಣ – ಐಟಿಬಿಟಿ, ಉನ್ನತ ಶಿಕ್ಷಣ ಇಲಾಖೆ
ಮುರುಗೇಶ್ ನಿರಾಣಿ – ಬೃಹತ್ ಮತ್ತುಮಧ್ಯಮ ಕೈಗಾರಿಕೆ
ಶ್ರೀರಾಮುಲು – ಸಾರಿಗೆ, ಹಿಂದುಳಿದ ವರ್ಗಗಳ ಕಲ್ಯಾಣ
ಸೋಮಣ್ಣ – ವಸತಿ ಮತ್ತು ಮೂಲಸೌಕರ್ಯ
ಕೋಟ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ ಇಲಾಖೆ
ಸುಧಾಕರ್- ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ
ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ
ಗೋಪಾಲಯ್ಯ – ಅಬಕಾರಿ ಇಲಾಖೆ
ಉಮೇಶ್ ಕತ್ತಿ – ಅರಣ್ಯ ಇಲಾಖೆ, ಆಹಾರ ಇಲಾಖೆ
ಮಾಧುಸ್ವಾಮಿ- ಕಾನೂನು ಮತ್ತು ಸಂಸದೀಯ ಇಲಾಖೆ, ಸಣ್ಣ ನೀರಾವರಿ ಇಲಾಖೆ
ಸಿ.ಸಿ.ಪಾಟೀಲ್- ಲೋಕೋಪಯೋಗಿ ಇಲಾಖೆ
ಶಶಿಕಲಾ ಜೊಲ್ಲೆ – ಮುಜರಾಯಿ ಇಲಾಖೆ, ಹಜ್ ಮತ್ತು ವಕ್ಫ್
ಎಸ್.ಅಂಗಾರ – ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಇಲಾಖೆ
ಆನಂದ್ ಸಿಂಗ್ – ಪ್ರವಾಸೋದ್ಯಮ ಇಲಾಖೆ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ
ಮುನಿರತ್ನ – ತೋಟಗಾರಿಕೆ ಇಲಾಖೆ
ಶಿವರಾಂ ಹೆಬ್ಬಾರ್- ಕಾರ್ಮಿಕ ಇಲಾಖೆ
ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆ
ಪ್ರಭು ಚೌಹಾನ್- ಪಶುಶಂಗೋಪನೆ
ಎಸ್.ಟಿ.ಸೋಮಶೇಖರ್ – ಸಹಕಾರ
ಎಂಟಿಬಿ ನಾಗರಾಜ್ – ಪೌರಾಡಳಿತ
ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ
ಶಂಕರ್ ಪಾಟೀಲ್ ಮುನೇನಕೊಪ್ಪ – ಜವಳಿ ಮತ್ತು ಕೈಮಗ್ಗ ಇಲಾಖೆ, ಸಕ್ಕರೆ ಇಲಾಖೆ
ನಾರಾಯಣ್ ಗೌಡ – ರೇಷ್ಮೆ ಇಲಾಖೆ, ಯುವ ಜನ ಮತ್ತು ಕ್ರೀಡಾ ಇಲಾಖೆ
ಬೈರತಿ ಬಸವರಾಜ್ – ನಗರಾಭಿವೃದ್ದಿ ಇಲಾಖೆ