ಶತಕೋಟಿ ಭಾರತೀಯರ ಕನಸೊಂದು ಈಡೇರಿದೆ. 13 ವರ್ಷಗಳ ಬಳಿಕ ಭಾರತ ಟೋಕಿಯೋ ಓಲಂಪಿಕ್ಸ್ ನಲ್ಲಿ ಚಿನ್ನದ ಪದ ಗೆದ್ದು, ಇತಿಹಾಸ ನಿರ್ಮಿಸಿದೆ., ಹೌದು, ಶತಕೋಟಿ ಭಾರತೀಯರ ಕನಸು ನನಸಾಗಿದೆ. ಟೋಕಿಯೋ ಒಲಿಂಪಿಕ್ಸ್ ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕವನ್ನು ಗೆದ್ದು ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ತಮ್ಮ ಎರಡನೇ ಪ್ರಯತ್ನದಲ್ಲೇ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.
ವಿಶೇಷ ಅಂದರೆ, ಇಲ್ಲಿಯವರೆಗೆ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತ ಯಾವುದೇ ಪದಕ ಗೆದ್ದಿರಲಿಲ್ಲ. ಇದೀಗ ನಿರಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದು, ಶತಮಾನದ ಚಿನ್ನದ ಬರವನ್ನು ನೀಗಿಸಿದ್ದಾರೆ. ನೀರಜ್ ಚೋಪ್ರಾ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದು, ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಭಾರತ ಸ್ವಾತಂತ್ರ್ಯಗೊಂಡ ಬಳಿಕ ಅಥ್ಲೀಟಿಕ್ಸ್ ವಿಭಾಗದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ದೇಶಕ್ಕೆ ನೀರಜ್ ಚೋಪ್ರಾ ಮೊದಲ ಪದಕ ಗೆದ್ದು ಕೊಟ್ಟಿದ್ದಾರೆ. ಭಾರತೀಯ ಸೇನೆಯಲ್ಲಿ ಉದ್ಯೋಗಿಯಾಗಿರುವ ನೀರಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದು, ಶತಕೋಟಿ ಭಾರತೀಯರ ಮನಗೆದ್ದಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್