Trending

ಗದ್ದೆ ಕೆಲಸ ಮುಗಿಸಿ ಕಾಲು ತೊಳೆಯಲು ನದಿಗೆ ಇಳಿದ ಯುವಕ ಕಾಲುಜಾರಿ ಬಿದ್ದು ಸಾವು: ಕುಟುಂಬದಲ್ಲಿ ಮುಗಿಲುಮುಟ್ಟಿದ ಆಕ್ರಂದನ

ಭಟ್ಕಳ: ಗದ್ದೆ ಕೆಲಸ ಮುಗಿಸಿ ಕಾಲು ತೊಳೆಯಲು ನೀರಿಗೆ ಇಳಿದ ಯುವಕನೊರ್ವ ನೀರು ಪಾಲಾಗಿದ್ದಾನೆ. ಈ ಘಟನೆ ನಡೆದಿರೋದು ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಜಾಗಟೆ ಬೈಲನ ವೆಂಕಟಪುರ ನದಿಯಲ್ಲಿ. ನೀರುಪಾಲಾದ ಯುವಕ ಜಯಂತ ರಾಮಗೊಂಡ 19ವರ್ಷ ಎಂದು ಗುರುತಿಸಲಾಗಿದೆ.
ಈತ ಗದ್ದೆ ಕೆಲಸ ಮುಗಿಸಿ ಕಾಲು ತೊಳೆಯಲು ನೀರಿಗೆ ಇಳಿದಾಗ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ನಾಪತ್ತೆಯಾಗಿದ್ದ, ಸುದ್ದಿ ತಿಳಿದು ಸ್ಥಳಕ್ಕೆ ನೂರಾರು ಜನರು ಆಗಮಿಸಿ ನದಿ ದಂಡೆಯಲ್ಲಿ ಸೇರಿದ್ದರು.

ವೆಂಕಟಪುರ ಹೂಳೆಯಲ್ಲಿ ಸ್ಥಳೀಯ ಯುವಕರು ಹುಡುಕಾಟ ನಡೆಸಿ , ಶವನ್ನು ಮೇಲಕ್ಕೆ ಎತ್ತಲಾಗಿದೆ, ಯುವಕನ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ, ಸ್ಥಳಕ್ಕೆ ಗ್ರಾಮೀಣ ಠಾಣೆ ಪಿ.ಎಸ್.ಐ ಭರತ ಹಾಗೂ ಸಿಬ್ಬಂದಿಗಳು ಆಗಮಿಸಿ ಪರಿಶೀಲಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button