Follow Us On

WhatsApp Group
Big News
Trending

‘ಚಿನ್ನದ ವೀರ’ ಚೋಪ್ರಾಗೆ ತರಬೇತಿ‌ ನೀಡಿದ್ದ ಉತ್ತರ’ಕನ್ನಡಿಗ’ ಕಾಶಿನಾಥರಿಗೂ ಬಹುಮಾನ ಘೋಷಣೆ

ಕಾರವಾರ: ಓಲಂಪಿಕ್ ಇತಿಹಾಸದಲ್ಲೇ ಭಾರತಕ್ಕೆ ಅಥ್ಲೆಟಿಕ್ಸ್ ವಿಭಾಗದಲ್ಲಿ ಚೊಚ್ಚಲ ಚಿನ್ನದ ಪದಕ ತಂದುಕೊಟ್ಟ ಜಾವೆಲಿನ್ ಪಟು ನೀರಜ್ ಚೋಪ್ರಾ ಅವರಿಗೆ ತರಬೇತಿ ನೀಡಿದ್ದ ಉತ್ತರ’ಕನ್ನಡಿಗ’ ಕಾಶಿನಾಥ ನಾಯ್ಕ ಅವರಿಗೆ ಕರ್ನಾಟಕ ಸರ್ಕಾರ 10 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ.

ಭಾರತೀಯ ಸೇನೆಯಲ್ಲಿ ಸುಬೇದಾರ್ ಹುದ್ದೆಯಲ್ಲಿರುವ, ಪ್ರಸ್ತುತ ಪುಣೆಯ ಸೇನಾ ಕ್ರೀಡಾ ಇನ್‌ಸ್ಟಿಟ್ಯೂಟ್‌ನಲ್ಲಿ ತರಬೇತುದಾರರಾಗಿರುವ, ಮೂಲತಃ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಕಾಶಿನಾಥ ನಾಯ್ಕ ಜಾವೆಲಿನ್ ನ ಚಿನ್ನದ ಪದಕ ವೀರ ನೀರಜ್ ಚೋಪ್ರಾ ಅವರಿಗೆ ಮೂರು ವರ್ಷಗಳ‌ ಕಾಲ ತರಬೇತಿ ನೀಡಿದ್ದರು.

23 ವರ್ಷದಿಂದ ಸೇನೆಯಲ್ಲಿರುವ ಕಾಶಿನಾಥ ನಾಯ್ಕ, 2010ರ ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ ನ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಗಳಿಸಿದ್ದರು. 2013ರಿಂದ 2019ರವರೆಗೆ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ತರಬೇತಿ ನೀಡುತ್ತಿದ್ದ ಕಾಶಿನಾಥ ನಾಯ್ಕರ ಬಳಿ ನೀರಜ್ ಚೋಪ್ರಾ 2015ರಲ್ಲಿ ತರಬೇತಿಗೆ ಸೇರಿದ್ದರು.

2017ರವರೆಗೆ ನೀರಜ್ ಚೋಪ್ರಾಗೆ ಕಾಶೀನಾಥ್ ತರಬೇತಿ ನೀಡಿದ್ದರು. ಕಾಶಿನಾಥ ಅವರ ತರಬೇತಿಯಿಂದಾಗಿ 2016ರಲ್ಲೇ ನೀರಜ್ ಜೂನಿಯರ್ ವಿಭಾಗದಲ್ಲಿ 86.48 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ವಿಶ್ವ ದಾಖಲೆ ಮಾಡಿದ್ದರು.

ಒಲಿಂಪಿಕ್ಸ್ ನ ‘ಚಿನ್ನದ ವೀರ’ ನೀರಜ್ ಚೋಪ್ರಾ ಹಿಂದಿನ ಶಕ್ತಿ ಉತ್ತರ’ಕನ್ನಡಿಗ’ ಎಂಬ ಶೀರ್ಷಿಕೆಯಡಿ ‘ಒನ್ ಇಂಡಿಯಾ ಕನ್ನಡ’ ಕೂಡ ನೀರಜ್ ಚೋಪ್ರಾ ಅವರಿಗೆ ಕಾಶಿನಾಥ ನಾಯ್ಕ ಅವರು ತರಬೇತಿ ನೀಡಿದ್ದ ಬಗ್ಗೆ ವರದಿ ಪ್ರಕಟಿಸಿತ್ತು. ವರದಿ ಗಮನಿಸಿದ ರಾಜ್ಯದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಅವರು ಕಾಶಿನಾಥ ನಾಯ್ಕ ಅವರಿಗೆ ನಗದು ಬಹುಮಾನ ಘೋಷಿಸಿದ್ದಾರೆ.

‘ಟೋಕಿಯೋ ಒಲಿಂಪಿಕ್‌ನ ಜಾವಲಿನ್‌ ವಿಭಾಗದಲ್ಲಿ ಭಾರತಕ್ಕೆ ಚಿನ್ನ ತಂದುಕೊಟ್ಟ ನೀರಜ್ ಚೋಪ್ರಾ ಅವರಿಗೆ ತರಬೇತುದಾರರಾಗಿರುವ ಉತ್ತರಕನ್ನಡ ಜಿಲ್ಲೆಯ ಕಾಶಿನಾಥ ನಾಯ್ಕ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಕಾಶಿನಾಥ ನಾಯ್ಕ ಅವರು 2010ರ ಕಾಮನ್‍ವೆಲ್ತ್ ಗೇಮ್ ನಲ್ಲಿ ಕಂಚು ಪದಕ ಗೆಲ್ಲುವ ಮೂಲಕ ದೇಶಕ್ಕೆ ಹೆಮ್ಮೆಯನ್ನು ತಂದಿದ್ದನ್ನು ಸಹ ಸ್ಮರಿಸುತ್ತೇವೆ ಎಂದು ಟ್ವೀಟ್ ಡಾ.ನಾರಾಯಣ ಗೌಡ ಟ್ವೀಟ್ ಮಾಡಿದ್ದಾರೆ.

ಮುಂದುವರಿದು, ‘ಟೋಕಿಯೊ ಒಲಿಂಪಿಕ್ ನಲ್ಲಿ ಈಟಿ ಎಸೆತದಲ್ಲಿ ಚಿನ್ನಕ್ಕೆ ಕೊರಳೊಡ್ಡಿದ ನೀರಜ್ ಛೋಪ್ರಾ ಅವರ ಸಾಧನೆ ಹಿಂದಿನ ಶಕ್ತಿಯಾಗಿರುವ ತರಬೇತುದಾರರಾದ ಶಿರಸಿಯ ಕಾಶಿನಾಥ ನಾಯ್ಕ ಅವರಿಗೆ ಇಲಾಖೆಯಿಂದ ರೂ.10 ಲಕ್ಷ ನಗದು ಬಹುಮಾನ ಘೋಷಿಸಿದ್ದೇನೆ.

ಟೋಕಿಯೋ ಒಲಿಂಪಿಕ್ ನಲ್ಲಿ ಅಮೋಘ ಸಾಧನೆಗೈದ ಭಾರತದ 7 ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು. ಮುಖ್ಯಮಂತ್ರಿಗಳ ಜೊತೆಗೂ ಚರ್ಚಿಸಿದ್ದೇನೆ. ಈ ವೇಳೆ ತರಬೇತುದಾರರಾದ ಕಾಶಿನಾಥ ನಾಯ್ಕ ಅವರನ್ನೂ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button