ಕಾರವಾರ: ಎಸ್.ಎಸ್.ಎಲ್.ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಉತ್ತರಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆ ಉತ್ತಮ ಸಾಧನೆ ಮಾಡಿದೆ. ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಮೂವರು ವಿದ್ಯಾರ್ಥಿಯರು 625ಕ್ಕೆ 625 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ಸಿದ್ದಾಪುರದ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಎಸ್.ಎನ್.ಸುನೈ ಹಾಗು ರೇಷ್ಮಾ ಹೆಗಡೆ , ಪ್ರಶಾಂತಿ ವಿದ್ಯಾನಿಕೇತನದಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಹೇಮಾ ಉಮೇಶ ಹೆಗಡೆ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ರ‍್ಯಾಂಕ್ ಪಡೆದಿದ್ದಾರೆ.
ಇನ್ನು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸರ್ಕಾರಿ ಪ್ರಾಥಮಿಕ ಫ್ರೌಢಶಾಲೆಯ ಭೂಮಿಕ ಕೃಷ್ಣ ನಾಯ್ಕ 625 ಅಂಕಕ್ಕೆ 625 ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ. ಕಳೆದ ವರ್ಷ 625ಕ್ಕೆ 625 ಅಂಕವನ್ನು ಓರ್ವ ವಿದ್ಯಾರ್ಥಿನಿ ಮಾತ್ರ ಮಾಡಿದ್ದು, ಈ ಬಾರಿ ನಾಲ್ವರು ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದು, ಉತ್ತರಕನ್ನಡದ ಕೀರ್ತಿಯನ್ನು ಹೆಚ್ಚಿಸುವಂತೆ ಮಾಡಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.