Follow Us On

Google News
Important
Trending

ಹಲವು ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು: ಇನ್ನೊರ್ವ ಆರೋಪಿಗಾಗಿ ಶೋಧ

ಮುಂಡಗೋಡ: ತಾಲೂಕಿನ ವಿವಿದೆಡೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬoಧಪಟ್ಟoತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿoದ 30 ಗ್ರಾಮ್ ಬಂಗಾರದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ಶೃಂಗೇರಿ ನಿವಾಸಿ ಅಬ್ದುಲ್ ಸತ್ತಾರ ಮೆಹಬೂಬ ಷರೀಪ್ ಶೇಖ(24) ಮತ್ತು ಶ್ರೀಧರ್ ಯಲ್ಲಪ್ಪ ಬಂಡಿವಡ್ಡರ(22) ಬಂಧಿತ ಆರೋಪಿಗಳು. ಆದರೆ, ಇನ್ನೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಕಳೆದ ಹಲವು ದಿನಗಳಿಂದ ತಾಲೂಕಿನ ವಿವಿಧೆಡೆ ಕಳ್ಳತನ ನಡೆಯುತ್ತಿದ್ದು, ಈ ಸಂಬoಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೇಡಸಗಾಂವ, ಕ್ಲಕೋಪ್ಪ ಗ್ರಾಮದಲ್ಲಿನ ಮನೆಗಳ ಕಳ್ಳತನ, ಗೋಟಗೋಡಿಕೊಪ್ಪ ಕ್ರಾಸ್ ಹತ್ತಿರ ರಾಬರಿ ಪ್ರಕರಣ, ಕೊಪ್ಪ ಗ್ರಾಮದ ಪಾಂಡುರoಗ ದೇವಸ್ಥಾನ ಕಳ್ಳತನ ಪ್ರಕರಣಕ್ಕೆ ಸಂಭoದಿಸಿದoತೆ ಬಗ್ಗೆ ಕೆಲ ದೂರು ದಾಖಲಾಗಿದ್ದವು. ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button