ಹೊರ ಜಿಲ್ಲೆಗಳಿಂದ ಬರುವವರ ಮಾಹಿತಿ ಸಂಗ್ರಹ, ಅವರ ಮೇಲೆ ನಿಗಾ: ಮೂರನೇಯ ಅಲೆಯ ನಿಯಂತ್ರಣಕ್ಕೆ ಕಠಿಣ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಿಧಾನವಾಗಿ ಕೋವಿಡ್ ಸೋಂಕು ಏರಿಕೆಯಾಗುತ್ತಿದ್ದು, ಇದು ಮೂರನೇಯ ಅಲೆಯ ಆತಂಕವನ್ನು ಹೆಚ್ಚಿಸಿದೆ. ಈ ನಡುವೆ ಜಿಲ್ಲಾಡಳಿತ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಮೂರನೇಯ ಅಲೆಯನ್ನು ಸಾಧ್ಯವಾದಷ್ಟು ನಿಯಂತ್ರಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದೆ ಇದ್ದರೆ ಮತ್ತಷ್ಟು ಕಠಿಣ ಕ್ರಮಗಳು ಜಾರಿಯಾಗುವ ಸಾಧ್ಯತೆಯಿದೆ.

ಇದೀಗ ಹೊರ ರಾಜ್ಯವಷ್ಟೇ ಅಲ್ಲ, ಹೊರ ಜಿಲ್ಲೆಗಳಿಂದ ಬರುವವರ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತಿದ್ದು, ಅವರ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. ಗ್ರಾಮ ಮಟ್ಟದಲ್ಲಿ ಈ ಬಗ್ಗೆ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿಗಳು ಸಂಬoಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈಗಾಗಲೇ ಗೋವಾದಿಂದ ರಾಜ್ಯಕ್ಕೆ ಬರುವವರಿಗೆ ಎರಡು ಲಸಿಕೆ ಪಡೆದ ಪ್ರಮಾಣಪತ್ರ ಅಥವಾ 72 ಗಂಟೆಯೊಳಗಿನ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಮಾಡಲಾಗಿದೆ. ಅಗತ್ಯಬಿದ್ದರೆ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬರುವವರನ್ನೂ ಕ್ವಾರಂಟೈನ್‌ನಲ್ಲಿಟ್ಟು ಆರ್‌ಟಿಪಿಸಿಆರ್ ತಪಾಸಣೆಗೊಳಪಡಿಸಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕಾರವಾರ

Exit mobile version