Uttara Kannada
Trending

ಕುಮಟಾದಲ್ಲಿ ನಾಲ್ವರಿಗೆ ಕರೊನಾ

ಕುಮಟಾ: ಹಲವು ದಿನಗಳ ಬಿಡುವಿನ ಬಳಿಕ ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ಕೊರೊನಾ ಮತ್ತೆ ಕಾಣಿಸಿಕೊಂಡಿದ್ದು, ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ಮಾಹಿತಿ ಬಂದಿದೆ. ಈ ನಾಲ್ವರು ಮಹಾರಾಷ್ಟ್ರದಿಂದ ಬಂದವರಾಗಿದ್ದು, ಎಲ್ಲರೂ ಕ್ವಾರಂಟೈನ್‌ನಲ್ಲಿದ್ದ ಇದ್ದರು ಎನ್ನಲಾಗಿದೆ. ಮೂವರು ಕೊಂಕಣ ಎಜುಕೇಷನ್ ಟ್ರಸ್ಟ್ ನ ಕ್ವಾರಂಟೈನ್ ಸೆಂಟರ್‌ನಲ್ಲಿದ್ದರು. ಓರ್ವ ತಾಲೂಕಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಇದ್ದ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಸೋಂಕು ದೃಢಪಟ್ಟ ನಾಲ್ವರನ್ನು ಕಾರವಾರಕ್ಕೆ ರವಾನಿಸಲಾಗುತ್ತಿದೆ. ಆರೋಗ್ಯ ಇಲಾಖೆ ಮಾಹಿತಿ ಇನ್ನೂ ಬಂದಿಲ್ಲವಾಗಿದ್ದು, ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗುತ್ತಿದೆ.

Back to top button