Focus News
Trending

ಕೋವಿಡ್ ನಿಯಂತ್ರಣಕ್ಕೆ ಮಹತ್ವದ ಕ್ರಮ: ಬಸ್ ಹಾಗು ರೈಲ್ವೆ ನಿಲ್ದಾಣಕ್ಕೆ ಬರುವ ನೆರೆ ರಾಜ್ಯದ ಪ್ರಯಾಣಿಕರಿಗೆ ಗಂಟಲು ದ್ರವದ ಪರೀಕ್ಷೆ, ಕ್ವಾರಂಟೈನ್ ಸೀಲ್

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಏರಿಕೆ ಕಾಣುತ್ತಿರುವ ಕೋವಿಡ್ ನಿಯಂತ್ರಿಸಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ ನೆರೆಯ ರಾಜ್ಯಗಳಿಂದ ಬಸ್ ಹಾಗು ರೈಲ್ವೆ ನಿಲ್ದಾಣಕ್ಕೆ ಬರುವ ಪ್ರಯಾಣಿಕರಲ್ಲಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದಿದ್ರೆ, ಅವರಿಗೆ ಕ್ವಾರಂಟೈನ್ ಸೀಲ್ ಹಾಕಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಅವರು ಈ ಸಂಬoಧ ಮಾಹಿತಿ ನೀಡಿದ್ದಾರೆ.

ಗೋವಾದಿಂದ ಬರುವ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ನೆಗೆಟಿವ್ ವರದಿ ಇಲ್ಲದವರಿಗೆ ಪ್ರವೇಶ ನೀಡುವುದಿಲ್ಲ. ಆದರೆ, ರೈಲ್ವೆ ಮತ್ತು ಬಸ್ ನಿಲ್ದಾಣಕ್ಕೆ ಬಂದ ಪ್ರಯಾಣಿಕರನ್ನು ವಾಪಸ್ ಕಳುಹಿಸಲು ಆಗುವುದಿಲ್ಲ. ಹೀಗಾಗಿ ಅವರ ಗಂಟಲು ದ್ರವದ ಮಾದರಿ ಸಂಗ್ರಹಿಸಿ, ಕ್ವಾರಂಟೈನ್ ಸೀಲ್ ಹಾಕಲಾಗುತ್ತದೆ.

ಇನ್ನೊಂದೆಡೆ ಕೆಲ ಅಗತ್ಯವಸ್ತುಗಳ ಪೂರೈಕೆಗಾಗಿ ಪ್ರತಿದಿನ ಕಾರವಾರ ಗೋವಾ ಸಂಚರಿಸುವವರಿಗೆ 10 ದಿನಗಳ ಅವಧಿಯ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ ಎಂದು ಜಿಲ್ಲಾದಿಕಾರಿಗಳು ಮಾಹಿತಿ ನೀಡಿದರು. ಒಟ್ಟಿನಲ್ಲಿ ಮೂರನೇಯ ಅಲೆಯ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ದಿನೇ ದಿನೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕಾರವಾರ

Back to top button