Follow Us On

WhatsApp Group
Important
Trending

ಬೈಕ್‌ಗೆ ಡಿಕ್ಕಿಹೊಡೆದ ಪುರಸಭಾ ವಾಹನ : ಬೈಕ್ ಸವಾರ ಗಂಭೀರ

ಭಟ್ಕಳ: ಚಲಿಸುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಪುರಸಭಾ ವಾಹನ ಬಡಿದ ಪರಿಣಾಮವಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ತಾಲೂಕಿನ ಸಾಗರರೋಡ್ ಬಳಿ ನಡೆದಿದೆ. ಅಪಘಾತದಿಂದಾಗಿ ಬೈಕ್ ಸವಾರನ ಕೈಗೆ ಬಲವಾದ ಏಟು ಬಿದ್ದಿದೆ. ಗಾಯಗೊಂಡವರನ್ನು ತಾಲೂಕಿನ ಹಾಡುವಳ್ಳಿ ಕುಂಟವಾಣಿ ನಿವಾಸಿ, ಮಾವಳ್ಳಿ ಗ್ರಾಪಂ ಕಾರ್ಯದರ್ಶಿ ಮಂಜುನಾಥ ಮಂಗಳಾ ಗೊಂಡ (43) ಎಂದು ಗುರುತಿಸಲಾಗಿದೆ.

ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಬೈಕ್ ಕುಂಟವಾಣಿಯಿoದ ಭಟ್ಕಳದ ಕಡೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪುರಸಭಾ ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವಿಸ್ಮಯ ನ್ಯೂಸ್, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888

Back to top button