Important
Trending

ಎರಡು ದಿನದ ಬಳಿಕ ಮೀನುಗಾರಿಕೆ ತೆರಳಿದ್ದ ವ್ಯಕ್ತಿಯ ಶವ ಪತ್ತೆ: ಕುಟುಂಬದಲ್ಲಿ ಮುಗಿಲುಮುಟ್ಟಿದ ಆಕ್ರಂದನ

ಹೊನ್ನಾವರ: ತಾಲೂಕಿನ ಹಳದೀಪುರದ ಬಸವರಾಜ ದುರ್ಗದ ಸಮೀಪ ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಕಾಲುಜಾರಿಬಿದ್ದು ಸಮುದ್ರ ಪಾಲಾಗಿದ್ದ ಕುಮಟಾ ವ್ಯಕ್ತಿಯ ಶವ ಕುಮಟಾ ಹೆಡ್ ಬಂದರ್ ಬೀಚ್ ಬಳಿ ಪತ್ತೆಯಾಗಿದೆ. ಕಳೆದ ಎರಡು ದಿನದ ಹಿಂದೆ ಹೊನ್ನಾವರ ತಾಲೂಕಿನ ಹಳದೀಪುರ ಸಮುದ್ರದಲ್ಲಿರುವ ಬಸವರಾಜ ದುರ್ಗದ ಸಮೀಪ ಆಕಸ್ಮಿಕವಾಗಿ ಕಾಲು ಜಾರಿ ಬೋಟ್ ಒಳಗಿಂದ ನೀರಲ್ಲಿ ಬಿದ್ದು ನಾಪತ್ತೆಯಾಗಿದ್ದ. ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಕುಮಟಾ ತಾಲೂಕಿನ ಕಲ್ಲಬ್ಬೆ ಕಂದವಳ್ಳಿಯ ನಿವಾಸಿ 32 ವರ್ಷದ ಗೋಪಾಲ ಗೌಡ ಎಂದು ಗುರುತಿಸಲಾಗಿದೆ. ಈ ಬಗ್ಗೆ ಹೊನ್ನಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಸತತ ಎರಡು ಮೂರು ದಿನಗಳ ಹುಡುಕಾಟದ ನಂತರ ಇಂದು ಇಂದು ಕುಮಟಾದ ಹೆಡ್ ಬಂದರ್ ಸಮೀಪ ಇಂದು ಶವ ಪತ್ತೆಯಾಗಿದೆ. ಬಸವರಾಜ ದುರ್ಗಾ ಬಳಿ ಸಾಕಷ್ಟು ಹುಡುಕಾಟ ನಡೆಸಿದ್ದರೂ ಯಾವುದೆ ಪ್ರಯೋಜವಾಗಿರರಲಿಲ್ಲ. ಈತನ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button