Follow Us On

WhatsApp Group
Focus News
Trending

ಹೈಟೆಕ್ ಸಂಚಾರ ನಿರ್ವಹಣಾ ಕೇಂದ್ರ ಉದ್ಘಾಟನೆ: ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ನೋಟೀಸ್

ಕಾರವಾರ: ಬೆಂಗಳೂರು ನಗರದ ಮಾದರಿಯಲ್ಲಿ ಸಾರ್ವಜನಿಕ ವಾಹನ ಸಂಚಾರ ದಟ್ಟಣೆ ನಿಯಂತ್ರಿಸುವ ಸಂಚಾರ ನಿರ್ವಹಣಾ ಕೇಂದ್ರವನ್ನು ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಆರಂಭಗೊಂಡಿದೆ.

ಇತ್ತಿಚೆಗೆ ನಗರದಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿದೆ. ಹೀಗಾಗಿ ಸಾರ್ವಜನಿಕರಿಗೆ ಸುರಕ್ಷಿತ ಹಾಗು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ನಗರದ ಪ್ರಮುಖ ವೃತ್ತಗಳಲ್ಲಿ ಅತ್ಯಾಧುನಿಕ ಕ್ಯಾಮರಾ ಅಳವಡಿಸಲಾಗಿದೆ. ಅಲ್ಲದೆ, ನಿರ್ವಹಣಾ ಕೇಂದ್ರದಿಂದಲೇ ವಾಹನ ಸವಾರರಿಗೆ ಸೂಚನೆಗಳನ್ನು ನೀಡಬಹುದಾಗಿದ್ದು, ಧ್ವನಿವರ್ಧಕಗಳನ್ನು ಕೂಡಾ ಅಳವಡಿಸಲಾಗಿದೆ. ಇಲ್ಲಿಂದಲೇ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲಾಗುತ್ತದೆ ಎಂದು ಜಿಲ್ಲಾ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದರು.

ಈಗಾಗಲೇ ನಿರ್ವಹಣಾ ಕೇಂದ್ರಕ್ಕೆ ಪ್ರತ್ಯೆಕ ಸಿಬ್ಬಂದಿ ನೇಮಕ ಮಾಡಲಾಗಿದೆ. ದಿನದ 24 ಗಂಟೆಗಳ ಕಾಲ ಸಂಚಾರ ದಟ್ಟಣೆ ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಮೇಲೆ ಇಲ್ಲಿಂದ ಕಣ್ಗಾವಲು ಇಡಲಾಗುತ್ತದೆ. ಇದಲ್ಲದೆ, ನಿಯಮ ಉಲ್ಲಂಘಿಸುವ ವಾಹನಗಳ ಪೆÇಟೋಗಳನ್ನು ತೆಗೆದುಕೊಂಡು ಮನೆಗಳಿಗೆ ನೊಟೀಸ್ ಕಳುಹಿಸಲಾಗುತ್ತದೆ ಎಂದು ಅವರು ತಿಳಿಸಿದರು.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button