Important
Trending
ಮತ್ತೊಂದು ದುರಂತ: ನೀರಿನ ಸುಳಿಗೆ ಸಿಲುಕಿ ಈಜಲು ತೆರಳಿದ ಮೆಡಿಕಲ್ ವಿದ್ಯಾರ್ಥಿ ಸಾವು: ವಾರದಲ್ಲೇ ಜೀವಕಳೆದುಕೊಂಡರು ಆರು ಮಂದಿ

ಗೋಕರ್ಣ: ಪ್ರವಾಸಿಗರು ಈಜಲು ತೆರಳಿ ಸಾವನ್ನಪ್ಪುತ್ತಿರುವ ಪ್ರಕರಣ ಜಿಲ್ಲೆಯ ಕಡಲತೀರದಲ್ಲಿ ಹೆಚ್ಚುತ್ತಿದೆ. ಕಳೆದ ಒಂದು ವಾರದಲ್ಲೇ ಆರು ಪ್ರವಾಸಿಗರು ಮೃತಪಟ್ಟಿದ್ದಾರೆ.

ಇದೀಗ ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗ ಅಲೆಗಳ ರಭಸಕ್ಕೆ ಸಿಕ್ಕಿ ಮೃತಪಟ್ಟ ಘಟನೆ ಗೋಕರ್ಣದ ಕುಡ್ಲೆ ಕಡಲತೀರದಲ್ಲಿ ನಡೆದಿದೆ .
ಗೋಕರ್ಣಕ್ಕೆ ಆರು ಜನ ವಿದ್ಯಾರ್ಥಿಗಳು ಪ್ರವಾಸಕ್ಕೆ ಎಂದು ಬೆಂಗಳೂರಿನಿಂದ ಬಂದಿದ್ದರು. ಈ ವೇಳೆ ಎಲ್ಲಾ ಆರು ಪ್ರವಾಸಿಗರು ಕುಡ್ಲೆ ಕಡಲತೀರದಲ್ಲಿ ಈಜು ತೆರಳಿದ್ದಾರೆ. ಈಜಲು ತೆರಳಿದ ವೇಳೆ ಅಲೆಗೆ ಸಿಕ್ಕಿ ವಿಕ್ರಮ್ ಸಾವು ಕಂಡಿದ್ದಾನೆ.

ವಿಕ್ರಮ್ ಬೀದರ್ ಜಿಲ್ಲೆಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಈ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್ ಗೋಕರ್ಣ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- Job: ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಉದ್ಯೋಗಾವಕಾಶ: ಇಂದೇ ಸಂಪರ್ಕಿಸಿ
- ಇಸ್ರೆಲ್ ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 1 ಲಕ್ಷದ 70 ಸಾವಿರ ಸಂಬಳ
- ಏಪ್ರಿಲ್ 12 ರಂದು ಬೀನಾ ವೈದ್ಯ ಅಕ್ಷರ ಪರ್ವ ಸ್ಕಾಲರ್ ಶಿಪ್ ಪ್ರವೇಶಾತಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯುವ ಸುವರ್ಣಾವಕಾಶ
- ಭಟ್ಕಳದ ಬೈಲೂರಿನಲ್ಲಿ ವಾತ್ಸಲ್ಯ ಮನೆ ಹಸ್ತಾಂತರ: ಸಂಸ್ಥೆಯ ಸಮಾಜಮುಖಿ ಕೆಲಸಕ್ಕೆ ಮೆಚ್ಚುಗೆ
- ಬೇಸಿಗೆ ರಜೆ ನಿಮಿತ್ತ 20 ದಿನಗಳ ಸಂಗೀತ ಸಂಸ್ಕಾರ ಶಿಬಿರ