Follow Us On

WhatsApp Group
Important
Trending

ನಿಯಂತ್ರಣ ತಪ್ಪಿ ಅವಾಂತರ: ರಸ್ತೆ ಪಕ್ಕದ ಅಂಗಡಿಗೆ ಗುದ್ದಿದ ಲಾರಿ!

ಹೊನ್ನಾವರ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ
ಅಂಗಡಿಗೆ ಲಾರಿ ಗುದ್ದಿದ ಘಟನೆ ಕರ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಸರಕು ತುಂಬಿದ ಕಂಟೆನರ್ ಲಾರಿ ನಿಯಂತ್ರಣ ತಪ್ಪಿ ಅಂಗಡಿಗೆ ಗುದ್ದಿದ್ದು, ಅಪಘಾತದ ರಭಸಕ್ಕೆ ಅಂಗಡಿಯ ಗೋಡೆ ಕುಸಿದು ಅಂಗಡಿಗೆ ಹಾನಿ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚಲಿಸುತ್ತಿದ್ದ ಕಂಟೇನರ್‌ ವಾಹನ ಏಕಾಏಕಿ ನಿಯಂತ್ರಣ ತಪ್ಪಿದ ಪರಿಣಾಮ ಘಟನೆ
ಸಂಭವಿಸಿದೆ. ಅಂಗಡಿಯಲ್ಲಿದ್ದ ಕೆಲವು ಸಾಮಗ್ರಿಗೆ ಹಾನಿಯಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button