Follow Us On

WhatsApp Group
Important
Trending

ಮನೆಯವರೆಲ್ಲರೂ ಸಂಬಂಧಿಕರ ಮನೆಗೆ ತೆರಳಿದ ವೇಳೆ ಫ್ಯಾನ್ ಗೆ ನೇಣುಬಿಗಿದುಕೊಂಡು ವ್ಯಕ್ತಿ ಸಾವು

ಭಟ್ಕಳ: ಮಾನಸಿಕ ಖಿನ್ನತೆಗೆ ಸಿಲುಕಿದ ವ್ಯಕ್ತಿಯೊಬ್ಬ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭಟನೆ ಶಿರಾಲಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಾದೇವ ಸಣ್ಣಮಂಜು ನಾಯ್ಕ ( 58) ಎಂದು ಗುರುತಿಸಲಾಗಿದೆ.

ಮೃತ ವ್ಯಕ್ತಿ ಕಳೆದ 2 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ವಿಷಯವನ್ನೇ ಮನಸ್ಸಿಗೆ ಹಚ್ಚಿಕೊಂಡು, ಮನೆಯವರೆಲ್ಲರೂ ಸಂಬಂಧಿಕರ ಮನೆಗೆ ತೆರಳಿದಾಗ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button