Follow Us On

WhatsApp Group
Important
Trending

ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತ: ವಾಹನದಲ್ಲೇ ವ್ಯಕ್ತಿ ಸಾವು

ಕಾರವಾರ: ವಾಹನ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ
ಸಂಭವಿಸಿದೆ. ಧಾರವಾಡ ಮೂಲದ ಮೈಲಾರಿ ಸಹದೇವಪ್ಪ ಜರಗ (23)ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಈತ ಹುಬ್ಬಳ್ಳಿಯಿಂದ ಕಾರವಾರ ನಗರಕ್ಕೆ ಇಲೆಕ್ಟಿಕಲ್ ಸಾಮಗ್ರಿಗಳನ್ನು ಪೂರೈಸಲು ಆಗಮಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಹೃದಯದಲ್ಲಿ ಕಾಣಿಸಿಕೊಂಡ ನೋವಿನಿಂದಾಗಿ ವಾಹನವನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದಾನೆ. ಈ ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ, ಈತ ಮೃತಪಟ್ಟಿರುವುದು ದೃಢಪಟ್ಟಿದೆ. ಸದ್ಯ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581 

Back to top button