Good News: ಸಾರಿಗೆ ಬಸ್ ನಲ್ಲಿ ಶೇಕಡಾ 100ರಷ್ಟು ಅನುಮತಿ: ಪ್ರಯಾಣಿಕರಿಗೆ ಸಂತಸದ ಸುದ್ದಿ

ಕಾರವಾರ: ಸಾರಿಗೆ ಬಸ್ ನಲ್ಲಿ ಶೇಕಡಾ 100ರಷ್ಟು ಅನುಮತಿ ನೀಡಲಾಗಿದ್ದು, ಈ ಮೊದಲು ಕೋವಿಡ್-19 ಹಿನ್ನೆಲೆಯಲ್ಲಿ ಸಾಮಾಜಿಕ ಅಂತರಕಾಪಾಡಿಕೊಳ್ಳವ ನಿಟ್ಟಿನಲ್ಲಿ ಬಸ್‌ಗಳಲ್ಲಿ ಶೇಕಡಾ 50 ರಷ್ಟು ಪ್ರಯಾಣಿಕರಿಗೆ ಮಾತ್ರ ಅನುಮತಿ ನೀಡಲಾಗಿತ್ತು, ಸರ್ಕಾರ ಈಗ ಬಸ್‌ಗಳಲ್ಲಿ ಶೇ. 100ರಷ್ಟು ಪ್ರಯಾಣಿಕರಿಗೆ ಪ್ರಯಾಣಿಸಲು ಅನುಮತಿ ನೀಡದೆ. ವಾ.ಕ.ರಾ.ರ.ಸಾ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಈ ಸಂಬoಧ ಮಾಹಿತಿ ನೀಡಿದ್ದಾರೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಉತ್ತರಕನ್ನಡ, ಗದಗ, ಹಾವೇರಿ, ಬಾಗಲಕೋಟ, ಬೆಳಗಾವಿ, ಮತ್ತುಚಿಕ್ಕೋಡಿ ವಿಭಾಗಗಳ ವ್ಯಾಪ್ತಿಯ ಘಟಕಗಳಿಂದ ಕೆಲವು ಅಂತರ್ ರಾಜ್ಯ ಸಾರಿಗೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ಸಾರಿಗೆಗಳನ್ನು ಪುನಃ ಪ್ರಾರಂಭಿಸಲಾಗಿದೆ.

ಚಾಲನಾ ಸಿಬ್ಬಂದಿಗಳು ಹಾಗೂ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ನೊಂದಿಗೆ ಸುರಕ್ಷತಾ ಕ್ರಮಗಳೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಪ್ರಯಾಣಿಸಬೇಕು. ಪ್ರಯಾಣಿಕರು ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version