Big News
Trending

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ: ಆದರೆ, ಈ ಷರತ್ತುಗಳು ಅನ್ವಯ?

ಕೋಟ್ಯಂತರ ಹಿಂದೂಗಳ, ಸಂಘಸAಸ್ಥೆಗಳ ಒತ್ತಡಕ್ಕೆ ಸರ್ಕಾರ ಮಣಿದಿದೆ. ಕೊನೆಗೂ ಅಳೆದು ತೂಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಸರಕಾರ ಷರತ್ತುಬದ್ಧ ಅನುಮತಿ ನೀಡಿದೆ. 3 ದಿನಗಳ ಮಟ್ಟಿಗೆ ಗಣೇಶೋತ್ಸವ ಆಚರಿಸಲು ಇದೀಗ ಅನುಮತಿ ಸಿಕ್ಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಸಿಕ್ಕಿದೆಯಾದರೂ., ಎಲ್ಲೆಂದರಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ. ಬೀದಿಗೆ ಒಂದರoತೆ, ಊರಿಗೆ ಒಂದರoತೆ ಗಣೇಶ ಪ್ರತಿಷ್ಠಾಪಿಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ತಿಳಿಸಲಾಗಿದೆ. ಸರಳವಾಗಿ ಗಣೇಶ ಉತ್ಸವ ಆಚರಣೆ ಮಾಡಬೇಕು, ಊರಿಗೆ ಇಂತಿಷ್ಟೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಷರತ್ತು ವಿಧಿಸಲಾಗಿದೆ.

ಅಲ್ಲದೆ, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯವಾಗಿದೆ. ಬಿಬಿಎಂಪಿ, ಜಿಲ್ಲಾಡಳಿತ, ಅಥವಾ ಸಂಬoಧಿಸಿದ ತಾಲೂಕಾಡಳಿತ ಅನುಮತಿ ಪಡೆಯಲೇಬೇಕು ಎಂದು ಮಾಹಿತಿ ನೀಡಲಾಗಿದೆ. ಇನ್ನೊಂದು ಅಂಶ ಏನೆಂದರೆ, ಜಿಲ್ಲಾಡಳಿತಗಳು ಸೂಚಿಸುವ ಸ್ಥಳಗಳಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಇದೆ. ಆದರೆ, ಎಲ್ಲೂ ವೇದಿಕೆ ಕಾರ್ಯಕ್ರಮಗಳಿಗೆ , ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ. ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button