Important

ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯ ಬಂಧನ

ಹೊನ್ನಾವರ: ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ವ್ಯಕ್ತಿಯನ್ನು ಮಂಕಿ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಳಸಿನಮೋಟೆಯ ಗಣಪಯ್ಯ ಚಂದ್ರು ಗೌಡ ಬಂಧಿತ ಆರೋಪಿ ಎನ್ನಲಾಗಿದೆ.

ಮಹಿಳೆಯು ಹೊನ್ನಾವರ ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ಅಸಭ್ಯವಾಗಿ ವರ್ತಿಸಿದ್ದ.‌ಅಲ್ಲದೆ ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆ ದೂರು ದಾಖಲಿಸಿದ್ದಳು.

ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ವಿಸ್ಮಯ ನ್ಯೂಸ್ ಹೊನ್ನಾವರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button