ಕೆ.ಡಿ.ಸಿ.ಸಿ ಬ್ಯಾಂಕಿನ ಶತಮಾನೋತ್ಸವ ಸಂಭ್ರಮಾಚರಣೆ: ಶತಮಾನೋತ್ಸವ ಭವನ ಲೋಕಾರ್ಪಣೆ

ಶಿರಸಿ: ಜಿಲ್ಲೆಯ ಪ್ರತಿಷ್ಠಿತ ಮಧ್ಯವರ್ತಿ ಬ್ಯಾಂಕ್ ( ಕೆ.ಡಿ.ಸಿ.ಸಿ ) ರೈತರ ಸೇವೆಯಲ್ಲಿ ಅತ್ಯಂತ ಯಶಸ್ವಿಯಾಗಿ ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ” ಶತಮಾನೋತ್ಸವ ಸಂಭ್ರಮಾಚರಣೆ ” ಸಮಾರಂಭ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ನೆರವೇರಿತು. ಬ್ಯಾಂಕ್ ನ ” ಶತಮಾನೋತ್ಸವದ ಸಂಭ್ರಮಾಚರಣೆಯ ” ಸವಿ ನೆನಪಿಗಾಗಿ ಶತಮಾನೋತ್ಸವ ಭವನವನ್ನು ವಿಧಾನಸಭೆಯ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸಹಕಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರೊಂದಿಗೆ ಲೋಕಾರ್ಪಣೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಶಿವರಾಮ್ ಹೆಬ್ಬಾರ್, ರೈತರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು.

ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ, ವಿಧಾನಪರಿಷತ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ, ಅಪೆಕ್ಸ್ ಬ್ಯಾಂಕ್ ನ ಅಧ್ಯಕ್ಷರಾದ ಬೆಳ್ಳಿ ಪ್ರಕಾಶ್ ಹಾಗೂ ಜಿಲ್ಲೆಯ ಶಾಸಕರು, ವಿಧಾನಪರಿಷತ ಸದಸ್ಯರು ಇದ್ದರು. ವಿಧಾನಪರಿಷತ ಸಭಾಧ್ಯಕ್ಷರಾದ ಶ್ರೀ ಬಸವರಾಜ ಹೊರಟ್ಟಿ ಅವರು ಶತಮಾನೋತ್ಸವದ ಸ್ಮರಣ ಸಂಚಿಕೆಯನ್ನು ಸಾಂಕೇತಿಕವಾಗಿ ಬಿಡುಗೊಳಿಸಿದರು ಹಾಗೂ ಕೃಷಿ ಸಚಿವರಾದ ಶ್ರೀ ಬಿ.ಸಿ.ಪಾಟೀಲ್ ಅವರು ಮೈಕ್ರೋ ಎ.ಟಿ.ಎಮ್ ಸೌಲಭ್ಯವನ್ನು ಹಾಗೂ ನಗರಾಭಿವೃದ್ಧಿ ಇಲಾಖೆ ಸಚಿವರಾದ ಶ್ರೀ ಭೈರತಿ ಬಸವರಾಜ ಅವರು ಭಾರತ ಬಿಲ್ ಪೇಮೆಂಟ್ ಸಿಸ್ಟಮ್ ಸೌಲಭ್ಯವನ್ನು ಉದ್ಘಾಟಿಸಿದರು.

ವಿಸ್ಮಯ ನ್ಯೂಸ್, ಶಿರಸಿ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version