Important
Trending

ಎಸಿಬಿ ದಾಳಿ: ಗುತ್ತಿಗೆದಾರನಿಂದ ಲಂಚಸ್ವೀಕರಿಸುತ್ತಿದ್ದ ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಎಸಿಬಿ ವಶಕ್ಕೆ

ಶಿರಸಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಲಂಚದ ಹಣದ ಸಮೇತ ಬಂಧಿಸಿದ ಘಟನೆ ಇಲ್ಲಿನ ಜಿಲ್ಲಾ ಪಂಚಾಯತ್ ನಲ್ಲಿ ನಡೆದಿದೆ. ಜಿಲ್ಲಾ ಪಂಚಾಯತದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯದುನಂದನ್ ಮತ್ತು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತಿದ್ದ ಸಿಬ್ಬಂದಿ ಸುಬ್ರಹ್ಮಣ್ಯ ಬಂಧಿತ ಆರೋಪಿಗಳಾಗಿದ್ದು, ಇವರು ಗುತ್ತಿಗೆದಾರನಿಗೆ ಹಣಕ್ಕಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ.

ಕಟ್ಟಡ ನಿರ್ಮಿಸುತ್ತಿದ್ದ ಗುತ್ತಿಗೆದಾರನಿಂದ 12 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಹಣದ ಸಮೇತ ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಗುತ್ತಿಗೆದಾರನಿಗೆ 4 ಲಕ್ಷ ಗಳ ಬಿಲ್ ಮಾಡಿಕೊಡಲು ಲಂಚಕ್ಕಾಗಿ ಪೀಡಿಸುತ್ತಿದ್ದು, ಹೀಗಾಗಿ ಗುತ್ತಿಗೆದಾರ ಎಸಿಬಿ ಠಾಣೆಯಲ್ಲಿ ದೂರು ನೀಡಿದ್ದರು.

ವಿಸ್ಮಯ ನ್ಯೂಸ್, ಶಿರಸಿ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button