ಮಾದಕವಸ್ತು ಮಾರಾಟ ಪ್ರಕರಣ | ಸ್ಥಳೀಯ ಪೊಲೀಸರ ಸಹಾಯ ಪಡೆದು ರೈಲ್ವೆ ನಿಲ್ದಾಣದಲ್ಲಿ ಕುಮಟಾದ ಯುವಕನ ಬಂಧಿಸಿದ ಗೋವಾ ಪೊಲೀಸರು

ಕುಮಟಾ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗೋವಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ಹೆರವಟ್ಟಾದ ಯುವಕನನ್ನು ಬಂಧಿಸಿದ್ದಾರೆ.

ರಜತ್ ನಾಯಕ ಹೆರವಟ್ಟಾದ ನಿವಾಸಿಯನ್ನು ಗೋವಾದ ಎನ್‌ಸಿಬಿ ಪೊಲೀಸರು ಬಂಧಿಸಿ, ಗೋವಾಕ್ಕೆ ಕರೆದುಕೊಂಡು ಹೋಗಿದ್ದಾರೆ. ಆರು ತಿಂಗಳ ಹಿಂದೆ ಗೋವಾದಲ್ಲಿ ದಾಖಲಾದ ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಕೆಲವ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾದಕವಸ್ತು ಕೇಸ್ ಗೆ ಸಂಬಂಧಪಟ್ಟಂತೆ ಗೋವಾ ಪೊಲೀಸರು ವಿಚಾರಣೆ ಸಂದರ್ಭದಲ್ಲಿ ಕುಮಟಾದ ರಜತ್‌ನ ಹೆಸರು ಕೂಡ ಕೇಳಿ ಬಂದಿತ್ತು ಎನ್ನಲಾಗಿದೆ.

ಸುಮಾರು ಎರಡು ದಿನಗಳ ಹಿಂದೆಯೇ ಕುಮಟಾಕ್ಕೆ ಆಗಮಿಸಿದ ಗೋವಾದ ಪೊಲೀಸರು ಸ್ಥಳೀಯ ಕುಮಟಾ ಪೊಲೀಸರ ಸಹಾಯ ಪಡೆದು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿ, ಗೋವಾಕ್ಕೆ ಕರೆದೊಯ್ದಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version