Important
Trending

ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಆಟೋ: ಓರ್ವ ಮಹಿಳೆ ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯೆ ಸಾವು: ಐವರು ಗಂಭೀರ ಗಾಯ

ದಾಂಡೇಲಿ: ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರವೊಂದಕ್ಕೆ ಡಿಕ್ಕಿಯಾಗಿ, ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ತಾಲೂಕಿನ ಕೇರವಾಡದಲ್ಲಿ ನಡೆದಿದೆ. ಇದೇ ವೇಳೆ ಆಟೋದಲ್ಲಿ ಉಳಿದ ಐವರು ಗಂಭೀರ ಗಾಯಗೊಂಡಿದ್ದಾರೆ. ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಕೇರವಾಡದ ಶ್ರೇಯಸ್ ಕಾರ್ಖಾನೆಯ ಹತ್ತಿರ ರಾಜ್ಯ ಹೆದ್ದಾರಿಯ ಬದಿಯಲ್ಲಿದ್ದ ಮರವೊಂದಕ್ಕೆ ಡಿಕ್ಕಿಯಾದ ವೇಳೆ ಈ ಅನಾಹುತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಚಾಲಕ ಸೇರಿದಂತೆ ರಿಕ್ಷಾದಲ್ಲಿದ್ದ ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರೆಲ್ಲರನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವಾಗ ತಲೆಗೆ ತೀವ್ರ ಹೊಡೆತಬಿದ್ದು ಗಂಭೀರ ಗಾಯಗೊಂಡಿದ್ದ ನಿವಾಸಿ ನಿರ್ಮಲಾ ಸುಣಗಾರ (42) ಮಾರ್ಗಮಧ್ಯವೇ ಮೃತಪಟ್ಟಿದ್ದಾಳೆ.

ಉಳಿದಂತೆ ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ಅನೀಲ್ ಮುತಗೇಕರ, ಪ್ರಯಾಣಿಕರುಗಳಾದ ಶಿವಕ್ಕಾ ಸುಣಗಾರ, ಶೋಭಾ ಗಣಾಚಾರಿ, ರೂಪಾ ಬ್ಯಾನಿ ಮತ್ತು ಲಕ್ಷ್ಮೀ ಅರುಟಗಿ ಅವರಿಗೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸಗೆ ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button