ಕಾರವಾರ: ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಅಥ್ಲೆಟಿಕ್ ವಿಭಾಗದ ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ಕಾರವಾರದ ನಿವೇದಿತಾ ಪ್ರಶಾಂತ ಸಾವಂತ 40.52 ಮೀಟರ್ ದೂರ ಡಿಸ್ಕ್ ಎಸೆಯುವ ಮೂಲಕ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.
ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ವತಿಯಿಂದ ನಡೆದ ಮುಕ್ತ ಪುರಷರ ಮತ್ತು ಮಹಿಳೆಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಈ ಸಾಧನೆ ಮಾಡಿದ್ದು ಈ ಮೂಲಕ ಸೆ.15 ರಿಂದ ತೆಲಂಗಾಣದ ವಾರಂಗಲ್ ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಮಹಿಳೆಯರ ಮುಕ್ತ ಅಥ್ಲೆಟಿಕ್ ಕ್ರೀಡಾ ಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾಳೆ. ಮಾತ್ರವಲ್ಲದೆ ಇದೇ ಸ್ಪರ್ಧೆಯಲ್ಲಿ ಮಹಿಳೆಯರ ಹೆಮರ್ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾಳೆ.
ನಿವೇದಿತಾ ಕ್ರೀಡಾ ಕೊಟಾದ ಅಡಿಯಲ್ಲಿ ತುಮಕೂರಿನ ಸಿದ್ದಗಂಗಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದು ಪ್ರಸ್ತುತ ಟಿಸಿಎಸ್ ನಲ್ಲಿ ಕೆಲಸಮಾಡುತ್ತಿದ್ದಾಳೆ. ಕಾರವಾರದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ತರಬೇತಿದಾರ ಪ್ರಕಾಶ ರೇವಣಕರ ರ ಬಳಿ ಕ್ರೀಡಾ ತರಬೇತಿ ಪಡೆಯುತ್ತಿದ್ದು ಇವಳ ಸಾಧನೆಗೆ ಉತ್ತರ ಕನ್ನಡ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಸದಾನಂದ ನಾಯ್ಕ, ಕಾರ್ಯದರ್ಶಿ ಕೆ.ಆರ್ ನಾಯಕ ಸೇರಿ ಜಿಲ್ಲೆಯ ಕ್ರೀಡಾಭಿಮಾನಿಗಳು ಶುಭ ಹಾರೈಸಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581