ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರ ಕೈಚಳಕ: ಪುರಾತನ ಕಾಲದ‌ ಚಿನ್ನಾಭರಣ ಕಳುವು

ಕಾರವಾರ: ಮನೆಯಲ್ಲಿ ಯಾರು ಇಲ್ಲದ ವೇಳೆ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಪುರಾತನ ಚಿನ್ನ ಕಳುವು ಮಾಡಿದ ಘಟನೆ ನಗರದ ಸಂಕ್ರಿವಾಡಾದಲ್ಲಿ ನಡೆದಿದೆ.

ಕಳೆದ ಆರು ದಿನಗಳಿಂದ ಮನೆಯ ಮಾಲೀಕರು ಗೋವಾಕ್ಕೆ ತೆರಳಿದ್ದರು. ಇದೇ ಸಂದರ್ಭವನ್ನು ಬಳಸಿಕೊಂಡು ಹೊಂಚುಹಾಕಿ ಕಂಡು ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. 2 ಲಕ್ಷ ರೂಪಾಯಿ ಮೌಲ್ಯದ ಒಟ್ಟು 20 ಗ್ರಾಮ್ ಹಳೆ ಕಾಲದ ಬಂಗಾರವನ್ನು ಕದ್ದಿದ್ದಾರೆ.

ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ,ಸ್ಥಳಕ್ಕೆ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version