ಭಟ್ಕಳ: 3 ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ರವಿವಾರ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪುತ್ತು ಪೈ ನಿವಾಸದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಅವರು ಭಟ್ಕಳದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಬೆಳಗಾವಿ ,ಹುಬ್ಬಳ್ಳಿ ಧಾರವಾಡ, ಕಲಬುರಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದ ಅವರು ಮೈಸೂರು ನಂಜನಗೂಡು ದೇವಾಲಯ ಕೆಡವಿರುವ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಆರೋಪಕ್ಕೆ ಉತ್ತರಿಸಿದ ಅವರು ಮೈಸೂರು ದೇವಾಲಯದ ವಿಷಯದಲ್ಲಿ ಸುಪ್ರೀಂಕೋರ್ಟ್ ತೀರ್ಮಾನವನ್ನು ಅಧಿಕಾರಿಗಳು ಅನುಷ್ಠಾನಕ್ಕೆ ತಂದಿದ್ದಾರೆ.ಆದರೆ ಧಾರ್ಮಿಕ ಕೇಂದ್ರಗಳನ್ನು ಒಡೆಯುವ ಮುನ್ನ ಪೂರ್ವಾಪರ ವಿಮರ್ಶೆ ನಡೆಸಬೇಕು ಎನ್ನುವುದು ಪಕ್ಷದ ನಿಲುವಾಗಿದ್ದು ದೇವಾಲಯವನ್ನು ಉಳಿಸುವುದು ನಮ್ಮ ಬೇಡಿಕೆಯಾಗಿದೆ ಈ ಬಗ್ಗೆ ಮುಖ್ಯಮಂತ್ರಿಗಳು ಗೃಹ ಸಚಿವರೊಂದಿಗೆ ಮಾತನಾಡುತ್ತೇನೆ ಎಂದರು .
ನಂತರ ಗುಜರಾತ್ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಪ್ರತಿಕ್ರಿಯಿಸಿದ್ದು ಚುನಾವಣೆ ಗೋಸ್ಕರವೇ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಲು ಸಾಧ್ಯವಿಲ್ಲ ಅದು ಪಕ್ಷದ ವರಿಷ್ಠರು ತೀರ್ಮಾನ ವಾಗಿದೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಶಾಸಕ ಸುನೀಲ ನಾಯ್ಕ, ಬಿಜೆಪಿ ಕೈಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕ ಪ್ರದೀಪ್ ಪೈ, ಬಿಜೆಪಿ ಭಟ್ಕಳ ಮಂಡಳ ಅಧ್ಯಕ್ಷ ಸುಬ್ರಾಯ ದೇವಡಿಗ, ಬಿಜೆಪಿ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ರವಿ ನಾಯ್ಕ ಜಾಲಿ ,ರಾಜೇಶ ನಾಯ್ಕ, ಮುಂತಾದವರು ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ