Follow Us On

WhatsApp Group
Important
Trending

ಸ್ಕೂಟಿಗೆ ಡಿಕ್ಕಿ ಹೊಡೆದ ಕಾರು: ಗಾಯಗೊಂಡು ರಸ್ತೆ ಮೇಲೆ ಬಿದ್ದ ಮಹಿಳೆ

ಕಾರವಾರ: ಕಾರು ಹಾಗೂ ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬಳು ಗಾಯಗೊಂಡಿರುವ ಘಟನೆ ನಗರದ ಶಿವಾಜಿ ಸರ್ಕಲ್ ಬಳಿ ನಡೆದಿದೆ. ಇಲ್ಲಿನ ಗ್ರಿನ್ ಸ್ಟ್ರೀಟ್ ರಸ್ತೆಯ ಮೂಲಕ ಸಂಚರಿಸುತ್ತಿರುವ ಸಂದರ್ಭದಲ್ಲಿ ಗೋವಾ ಕಡೆಯಿಂದ ಬರುತ್ತಿರುವ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಸ್ಕೂಟಿಯಲ್ಲಿದ್ದ ಮಹಿಳೆ ರಸ್ತೆ‌ ಮೇಲೆಯೇ ಉರುಳಿ ಬಿದ್ದಿದ್ದಾಳೆ. ಈ ವೇಳೆ ಮಹಿಳೆ ಗಾಯಗೊಂಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಘಟನೆಯಿಂದಾಗಿ ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದ್ದು, ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ವಿಸ್ಮಯ ನ್ಯೂಸ್ ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button