ಗೋಕರ್ಣ: ವೈದ್ಯಕೀಯ ಪದವಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತಾಲೂಕಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಗೋಕರ್ಣ ಪ್ರವಾಸಕ್ಕೆಂದು ತನ್ನ ಗೆಳೆಯರ ಜತೆ ಆಗಮಿಸಿದ್ದ. ಈ ವೇಳೆ ವಿದ್ಯಾರ್ಥಿಗೆ ಹೃದಯಾಘಾತವಾಗಿದೆ.
ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲು ಪ್ರಯತ್ನಿಸಲಾಯಿತು. ಈ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಕಾರವಾರ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಶವ ಸಾಗಿಸಲಾಗಿದ್ದು, ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿ ಮೂಲದ ಅಭಯ (30) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ವಿಸ್ಮಯ ನ್ಯೂಸ್, ಗೋಕರ್ಣ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581