ವಾರಕ್ಕೆ 15 ದಿನ ಮಾತ್ರ ಕೆಲಸ : ಗುತ್ತಿಗೆದಾರರ ವಿರುದ್ಧ 80ಕ್ಕೂ ಹೆಚ್ಚು ಕಾರ್ಮಿಕರ ಪ್ರತಿಭಟನೆ

ಕಾರವಾರ: ಗುತ್ತಿಗೆದಾರ ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸರಿಯಾಗಿ ಕೆಲಸ ನೀಡದೆ ಸತಾಯಿಸುತ್ತಿರುವುದನ್ನು ಖಂಡಿಸಿ ಗ್ರಾಸಿಂ ಇಂಡಸ್ಟ್ರಿಯ 80 ಕ್ಕೂ ಹೆಚ್ಚು ದಿನಗೂಲಿ ಕಾರ್ಮಿಕರು ಗುತ್ತಿಗೆದಾರರ ವಿರುದ್ಧ ಪ್ರತಿಭಟನೆ ನಡೆಸಿರುವ ಘಟನೆ ಬುಧವಾರ ನಡೆದಿದೆ.ನಗರದ ಬಿಣಗಾದಲ್ಲಿರುವ ಗ್ರಾಸಿಂ ಇಂಡಸ್ಟ್ರಿ ಬಳಿಯ ಮುಖ್ಯ ದ್ವಾರದ ಬಳಿ ಪೆಂಡಲ್ ಹಾಕಿ ಪ್ರತಿಭಟನೆ ನಡೆಸಿದ ಸುಮಾರು‌ 80 ಕ್ಕೂ ಹೆಚ್ಚು ಕಾರ್ಮಿಕರು ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಗ್ರಾಸಿಂ ಇಂಡಸ್ಟ್ರಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಆದರೆ ಗುತ್ತಿಗೆ ಪಡೆದ ಗುತ್ತಿಗೆದಾರರು ಕೊವಿಡ್ ನೆಪವೊಡ್ಡಿ ಕೇವಲ 15 ದಿನ‌ ಮಾತ್ರ ಕೆಲಸ ನೀಡುತ್ತಿದ್ದಾರೆ. ಆದರೆ ಇದರಿಂದ ನಮ್ಮ ಉದ್ಯೋಗವನ್ನೆ ನಂಬಿ ಜೀವನ ನಡೆಸುತ್ತಿರುವ ಕುಟುಂಬಗಳ ನಿರ್ವಹಣೆ ಸಾಧ್ಯವಾಗುತ್ತಿಲ್ಲ.

ಈ ಬಗ್ಗೆ ಕಂಪನಿ ಗಮನಕ್ಕೆ ತಂದರೂ ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ. ಕೂಡಲೇ ನಮ್ಮ ಸಮಸ್ಯೆಯನ್ನು ಬಗೆಹರಿಸಿ ತಿಂಗಳಿಗೆ 28 ದಿನ ಕೆಲಸ ನೀಡಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆ ವೇಳೆ ಸಂಘದ ಅಧ್ಯಕ್ಷ ಅಶೋಕ ಗೌಡ, ಸಂಜಯ ಪೇಡ್ನೆಕರ್, ಕೃಷ್ಣ ಬಾಲಚಂದ್ರ ಗೌಡ, ಉದಯ ನಾಯ್ಕ, ಹರೀಶ ನಾಯ್ಕ, ರಾಜೇಶ ಗುನಗಿ, ಅಂಥೋನಿ ಫರ್ನಾಂಡೀಸ್ ಇದ್ದರು.

ವಿಸ್ಮಯ ನ್ಯೂಸ್, ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version