ಕಾರಿನಲ್ಲಿ ಅಕ್ರಮವಾಗಿ ಮದ್ಯಸಾಗಾಟ : ಮಾಲು ಸಮೇತ ಆರೋಪಿಯನ್ನು ಬಂಧಿಸಿದ ಅಧಿಕಾರಿಗಳು

ಶಿರಸಿ ನಗರದಿಂದ ಸಿದ್ದಾಪುರ ತಾಲೂಕಿನ ಹಳ್ಳಿ‌ಹಳ್ಳಿಗೆ ಅಕ್ರಮವಾಗಿ ಮದ್ಯ ಸಾಗಿಸುತ್ತಿರುವ ವೇಳೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಅಂದಾಜು 60 ಲೀಟರ್ ಮದ್ಯ ಹಾಗೂ 12 ಲೀಟರ್ ಬಿಯರ್ ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿ ದಿನೇಶ ವೈಕುಂಠ ಎಂದು ಗುರುತಿಸಲಾಗಿದೆ. ಈತ ನಗರದಿಂದ ಸಿದ್ದಾಪುರ ತಾಲೂಕಿನ ಹಳ್ಳಿಗೆ ಓಮಿನಿಯಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ. ಖಚಿತ ಮಾಹಿತಿ ಆಧರಿಸಿ ಅಬಕಾರಿ ಅಧಿಕಾರಿಗಳು ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ. ಮದ್ಯ ಸಾಗಾಟಕ್ಕೆ ಬಳಸಿದ ಓಮಿನಿ ವಾಹನವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ವಿಸ್ಮಯ ನ್ಯೂಸ್ ಶಿರಸಿ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version