ಪಾಸಿಟಿವಿಟಿ ರೇಟ್ ಶೇಕಡಾ 1 ಕ್ಕಿಂತ ಕಡಿಮೆ ಹಿನ್ನಲೆ: ದೇವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ, ಸೇವೆಗಳಿಗೆ ಅವಕಾಶ

ಕಾರವಾರ : ಉತ್ತರ ಕನ್ನಡದಲ್ಲಿ ಕೋವಿಡ್ ಹರಡುವಿಕೆಯ ಪ್ರಮಾಣ ಸ್ವಲ್ಪ ನಿಂಯಂತ್ರಣಕ್ಕೆ ಬಂದರೂ ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಲಾಕ್‌ಡೌನ್ ಸಡಿಲಿಕೆ ಅನ್ವಯವಾಗಿರಲಿಲ್ಲ. ಆದರೆ ಇದೀಗ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಶೇಕಡಾ 1 ಕ್ಕಿಂತ ಕಡಿಮೆಯಿರುವ ಕಾರಣ ಕೋವಿಡ್ ನಿಯಮಗಳಲ್ಲಿ ಸಡಿಲಿಕೆ ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ನೂತನ ಆದೇಶ ಜಾರಿಗೊಳಿಸಿದ್ದಾರೆ.

ಈ‌ ನೂತನ ಆದೇಶದ ಪ್ರಕಾರ ಜಿಲ್ಲೆಯಲ್ಲಿ ಇರುವ ದೇವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ, ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ಜಿಲ್ಲಾಧಿಕಾರಿ ಆದೇಶವು ಜಾರಿಯಾಗಿದ್ದು ಇದರಿಂದಾಗಿ ಗೋಕರ್ಣ, ಮುರುಡೇಶ್ವರ, ಇಡಗುಂಜಿ ಸೇರಿದಂತೆ ಹಲವು ಧಾರ್ಮಿಕ ಕ್ಷೇತ್ರಗಳಿಗೆ ಆಗಮಿಸುವ ಭಕ್ತರಿಗೆ ಸೇವೆಗಳಿಗೆ ಅವಕಾಶ ಸಿಕ್ಕಂತಾಗಿದೆ.

ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಶೇ.1 ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇದೆ, ಜೋತೆಗೆ ಸಾವಿನ ಪ್ರಮಾಣ ಸಹ ಅತ್ಯಂತ ಕಡಿಮೆಯಾಗಿದೆ. ಪ್ರವಾಸೋಧ್ಯಮ ಹಾಗೂ ಧಾರ್ಮಿಕ ಕ್ಷೇತ್ರಕ್ಕೆ ಹೆಸರುವಾಸಿಯಾಗಿರುವ ಜಿಲ್ಲೆಯಲ್ಲಿ ಪ್ರವಾಸಿಗರ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಿದೆ.

ಆದರೂ ಕೋವಿಡ್ ಸಂಖ್ಯೆ ಈ ತಿಂಗಳಲ್ಲಿ ಅತ್ಯಲ್ಪವಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ನೂತನ ಆದೇಶ ಹೊರಡಿಸಿದ್ದಾರೆ.

ಇದೇ ವೇಳೆ,‌ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದಲ್ಲಿಯೂ ಸಹ ಭಕ್ತರಿಂದ ವಿವಿಧ ಸೇವಾಕಾರ್ಯಕ್ಕೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯಲ್ಲಿಗ ಕರೋನಾ ವೈರಸ್ ನಿಯಂತ್ರಣದಲ್ಲಿರುವದಿಂದ ದೇವಸ್ಥಾನಗಳಲ್ಲಿ ಹಾಗೂ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿಯೂ ಭಕ್ತರ ಸೇವೆಗೆ ಅವಕಾಶವಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಇಡಗುಂಜಿ ದೇವಸ್ಥಾನದಲ್ಲಿಯೂ ಕೂಡ ಭಕ್ತರ ಸೇವಾ ಕಾರ್ಯಕ್ಕೆ ಅವಕಾಶ ನೀಡಲಾಗುವುದು ಎಂದು ಅರ್ಚಕರು ತಿಳಿಸಿದ್ದಾರೆ.

ಬ್ಯುರೋ ರಿಪೋರ್ಟ್, ವಿಸ್ಮಯ ನ್ಯೂಸ್.

Exit mobile version