ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಬಸ್ ಡಿಕ್ಕಿ : ತಲೆಗೆ ಪೆಟ್ಟುಬಿದ್ದು ಪಾದಚಾರಿ ಸಾವು

ಯಲ್ಲಾಪುರ: ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೋರ್ವನಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ತಾಲೂಕಿನರಾಷ್ಟ್ರೀಯ ಹೆದ್ದಾರಿ 63ರ ಬಿಸಗೋಡ್ ಕ್ರಾಸ್ ಬಳಿ ಸಂಭವಿಸದೆ.

ತಾಲೂಕಿನ ಅರಬೈಲ್ ಜನತಾ ಕಾಲೋನಿ ನಿವಾಸಿ ರವಿ ಸಿದ್ದಿ (27) ಮೃತಪಟ್ಟ ದುರ್ದೈವಿ. ಈತ ರಸ್ತೆಯ ಪಕ್ಕ ನಡೆದುಕೊಂಡು ಹೋಗುವಾಗ ಕಲಘಟಗಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಬಸ್ ಚಾಲಕ ಆನಂದ ನಾಯ್ಕ ನಿಷ್ಕಾಳಜಿತನದಿಂದ ಅಪಘಾತ ಪಡಿಸಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version