ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ತೊಂದರೆಯಾದರೆ ಕಾನೂನು ಕ್ರಮ: ಜಿಲ್ಲಾಧಿಕಾರಿಗಳ ಎಚ್ಚರಿಕೆ
ಗೋಕರ್ಣ: ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ವಿವಾದ ಮತ್ತೆ ತಾರಕಕ್ಕೆ ಏರಿದ ಬೆನ್ನಲ್ಲೆ, ಜಿಲ್ಲಾಧಿಕಾರಿಗಳು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಅರ್ಚಕರ ಗಲಾಟೆಯಿಂದಾಗಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ತೊಂದರೆಯಾಗುತ್ತಿರುವoತೆ ಗೋಚರಿಸುತ್ತಿದೆ.
ದೇವಸ್ಥಾನದಲ್ಲಿ ಕಾನೂನು ಸುವ್ಯವಸ್ಥೆಗೆ ಅಡ್ಡ ಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮಹಾಬಲೇಶ್ವರ ಮಂದಿರದ ಗರ್ಭಗುಡಿಯಲ್ಲಿರುವ ಆತ್ಮಲಿಂಗ ಪೀಠದಲ್ಲಿ ಆಸೀನರಾಗುವ ಮತ್ತು ನಂದಿಗೃಹದಲ್ಲಿನ ಪ್ರಸಾದ ವಿತರಣೆ ವಿಚಾರದಲ್ಲಿ ಉಪಾಧಿವಂತರ ಎರಡು ಬಣಗಳ ನಡುವೆ ವಿವಾದ ಏರ್ಪಟ್ಟಿದೆ. ಈಗಾಗಲೇ ಸೆಪ್ಟೆಂಬರ್ 27ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಉಪ ವಿಭಾಗಾಧಿಕಾರಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ವಿಸ್ಮಯ ನ್ಯೂಸ್, ಗೋಕರ್ಣ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581