Follow Us On

WhatsApp Group
Important
Trending

9 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ 60 ವರ್ಷದ ವ್ಯಕ್ತಿಯ ಲೈಂಗಿಕ ದೌರ್ಜನ್ಯ: ಬಾಲಕಿಗೆ ಹೆದರಿಸಿ ಬಾಯಿ ಮುಚ್ಚಿಸುವ ಪ್ರಯತ್ನ

ಹಳಿಯಾಳ: ಒಂಭತ್ತು ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ 60 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೌದು, 60 ವರ್ಷದ ವ್ಯಕ್ತಿಯೊಬ್ಬ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ತನ್ನ ಮನೆಯಲ್ಲಿ ಬಾಲಕಿ ಮೇಲೆ ದೌರ್ಜನ್ಯ ನಡೆಸಿದ್ದಾನೆ. ಅಲ್ಲದೆ, ತನ್ನ ಹೊಲಕ್ಕೂ ಸಹ ಕರೆದುಕೊಂಡು ಹೋಗಿ ಪುನಃ ದೌರ್ಜನ್ಯ ನಡೆಸಿ ಮತ್ತೆ ಮನೆಗೆ ಕರೆದುಕೊಂಡು ತಂದು ಬಿಟ್ಟಿದ್ದಾನೆ.

ಬಾಲಕಿಗೆ ಈತ ಹೆದರಿಸಿದ್ದರಿಂದ ಎರಡು ಮೂರು ದಿನ ಈ ವಿಷಯವನ್ನು ಕುಟುಂಬದವರಿಗೆ ತಿಳಿಸಿರಲಿಲ್ಲ ಎನ್ನಲಾಗಿದೆ. ಆದರೆ, ಬಾಲಕಿ ಆರೋಗ್ಯದಲ್ಲಿ ವ್ಯತ್ಯಾಸವಾದಾಗ ವಿಚಾರಿಸಿದಾಗ ತನಗಾದ ಕಹಿ ಅನುಭವನ್ನು ತಿಳಿಸಿದ್ದಾಳೆ. ಮನೆಯವರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಶಿವಾನಂದ ಗೌಳೇರ್ ಎಂದು ತಿಳಿದುಬಂದಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ನಿಮ್ಮೂರಲ್ಲೂ ಸೂಪರ್ ಸ್ಟೋರ್ ಮಾಡಬೇಕೆ?
ಸ್ಟೋರ್ ಕಿಂಗ್, ಸ್ಮಾರ್ಟ್ ಸೂಪರ್ ಸ್ಟೋರ್: ನಿಮಗೆ ನೀವೆ ಮಾಲೀಕರಾಗಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ತಂತ್ರಜ್ಞಾನ ಚಾಲಿತ ಸೂಪರ್ ಮಾರ್ಕೆಟ್ ನಿರ್ಮಿಸಿ ಹಾಗು ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ. ಸಣ್ಣ ಮಟ್ಟದ ಬಂಡಾವಳ ಹೂಡಿಕೆ ಮಾಡಿ, ನಮ್ಮೊಂದಿಗೆ ಪಾಲುದಾರರಾಗಿ.. ನಿಮ್ಮೂರಲ್ಲೂ ಸೂಪರ್ ಮಾರ್ಕೆಟ್ ನಿರ್ಮಿಸಬೇಕೆಂದಿದ್ದರೆ, ಇದಕ್ಕಿಂತ ಒಳ್ಳೆಯ ಸುವರ್ಣಾವಕಾಶ ಇನ್ನೊಂದಿಲ್ಲ. ತಂತ್ರಜ್ಞಾನ, ಪ್ರಾಡೆಕ್ಟ್, ಲಾಜಿಸ್ಟಿಕ್ಟ್ ನಿಂದ ಹಿಡಿದು ಎಲ್ಲ ರೀತಿಯ ಬೆಂಬಲವನ್ನೂ ನಾವು ನಿಮಗೆ ನೀಡುತ್ತೇವೆ. ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ : 7338463571

Back to top button