Follow Us On

WhatsApp Group
Important
Trending

ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ: ಸಾವಿಗೆ ಕಾರಣ ಇನ್ನೂ ನಿಗೂಢ

ಶಿರಸಿ: ಬಾವಿಯಲ್ಲಿ ಶವ ಪತ್ತೆಯಾದ ಘಟನೆ ಇಲ್ಲಿನ ಪಡ್ತಿಗಲ್ಲಿಯ ನಡೆದಿದೆ. ಬಳಕೆಯಿಲ್ಲದ ನಿವೇಶದಲ್ಲಿದ್ದ ತೆರೆದ ಬಾವಿಯಲ್ಲಿ ಶವ ತೇಲುತ್ತಿದ್ದು, ತೀವ್ರ ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದು, ಮೃತ ವ್ಯಕ್ತಿ ಸಿದ್ದಾಪುರ ಮೂಲದ ಪುಂಡಲೀಕ ಅಂಬಿಗ ಎಂದು ತಿಳಿದುಬಂದಿದೆ.

ನಿನ್ನೆ ಮೊಬೈಲ್‌ಗೆ ಕರೆನ್ಸಿ ಹಾಕಿಕೊಂಡು ಬರುತ್ತೇನೆ ಅಂತಾ ಹೇಳಿ ಮನೆಯಿಂದ ಹೋಗಿದ್ದ ಈತ ವಾಪಸ್ ಮನೆಗೆ ಬರದೇ ನಾಪತ್ತೆಯಾಗಿದ್ದ. ಕಾಣೆಯಾದ ಮಗನನ್ನು ಹುಡುಕಿಕೊಡುವಂತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.

ವಿಸ್ಮಯ ನ್ಯೂಸ್, ಶಿರಸಿ

ನಿಮ್ಮೂರಲ್ಲೂ ಸೂಪರ್ ಸ್ಟೋರ್ ಮಾಡಬೇಕೆ?
ಸ್ಟೋರ್ ಕಿಂಗ್, ಸ್ಮಾರ್ಟ್ ಸೂಪರ್ ಸ್ಟೋರ್: ನಿಮಗೆ ನೀವೆ ಮಾಲೀಕರಾಗಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ತಂತ್ರಜ್ಞಾನ ಚಾಲಿತ ಸೂಪರ್ ಮಾರ್ಕೆಟ್ ನಿರ್ಮಿಸಿ ಹಾಗು ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ. ಸಣ್ಣ ಮಟ್ಟದ ಬಂಡಾವಳ ಹೂಡಿಕೆ ಮಾಡಿ, ನಮ್ಮೊಂದಿಗೆ ಪಾಲುದಾರರಾಗಿ.. ನಿಮ್ಮೂರಲ್ಲೂ ಸೂಪರ್ ಮಾರ್ಕೆಟ್ ನಿರ್ಮಿಸಬೇಕೆಂದಿದ್ದರೆ, ಇದಕ್ಕಿಂತ ಒಳ್ಳೆಯ ಸುವರ್ಣಾವಕಾಶ ಇನ್ನೊಂದಿಲ್ಲ. ತಂತ್ರಜ್ಞಾನ, ಪ್ರಾಡೆಕ್ಟ್, ಲಾಜಿಸ್ಟಿಕ್ಟ್ ನಿಂದ ಹಿಡಿದು ಎಲ್ಲ ರೀತಿಯ ಬೆಂಬಲವನ್ನೂ ನಾವು ನಿಮಗೆ ನೀಡುತ್ತೇವೆ. ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ : 7338463571

Back to top button