ಈಜಲು ತೆರಳಿದ ವೇಳೆ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಪ್ರವಾಸಿಗನ ರಕ್ಷಣೆ: ಅಂತೂ ಬದುಕಿತು ಜೀವ

ಗೋಕರ್ಣ: ಐವರು ಪ್ರವಾಸಿಗರು ಇಲ್ಲಿನ ಕಡಲತೀರದ ಸೌಂದರ್ಯ ಸವಿಯಲು ಪ್ರವಾಸಕ್ಕೆ ಬಂದಿದ್ದರು. ಹೌದು, ಹುಬ್ಬಳ್ಳಿ ಮೂಲದ ಐವರು ಪ್ರವಾಸಿಗರು ಗೋಕರ್ಣ ಕಡಲತೀರಕ್ಕೆ ಬಂದ ವೇಳೆ, ಈಜಲು ತೆರಳಿದ್ದಾರೆ. ಈ ವೇಳೆ ಓರ್ವ ಪ್ರವಾಸಿಗ ನೀರಿನ ಸೆಳೆತಕ್ಕೆ ಸಿಕ್ಕಿ, ಕೊಚ್ಚಿಹೋಗಿದ್ದ.
ಇದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ, ಪ್ರವಾಸಿಗನ ರಕ್ಷಣೆಗೆ ಮುಂದಾಗಿದ್ದಾರೆ.

ನೀರಲ್ಲಿ ಮುಳುಗಿ, ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಪ್ರವಾಸಿಗನನ್ನು ಜೀವದ ಹಂಗು ತೊರೆದು ರಕ್ಷಣೆ ಮಾಡಿದ್ದಾರೆ. ರಕ್ಷಣೆಗೊಳಗಾದ ಪ್ರವಾಸಿಗ ರೋಹಿತ್ ಪಾಟೀಲ್(21) ನಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದ್ದಾರೆ. ಎಷ್ಟೆ ಎಚ್ಚರಿಕೆ ನೀಡುತ್ತಿದ್ದರೂ ಪ್ರವಾಸಕ್ಕೆ ಬರುವ ಪ್ರವಾಸಿಗರು ಪದೇ ಪದೇ ಈಜಲು ತೆರಳಿ ಜೀವವನ್ನು ಅಪಾಯದಲ್ಲಿ ಒಡ್ಡಿಕೊಳ್ಳುತ್ತಿರುವುದು ವಿಪರ್ಯಾಸವೇ ಸರಿ.

ವಿಸ್ಮಯ ನ್ಯೂಸ್, ಗೋಕರ್ಣ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version