ಕರ್ತವ್ಯದ ನೆಪವೊಡ್ಡಿ ಅರಣ್ಯಾಧಿಕಾರಿಗಳ ದರ್ಪದ ವರ್ತನೆ? ಅಂಗಡಿಯ ರಿಪೇರಿಗೆ ಅಡ್ಡಿ: ಮಹಿಳೆ ಅಸ್ವಸ್ಥ

ಭಟ್ಕಳ: ತಮ್ಮ ಅಂಗಡಿಯ ರಿಪೇರಿ ಮಾಡುವ ವೇಳೆ ಸ್ಥಳಕ್ಕೆ ಬಂದ ಅರಣ್ಯ ಇಲಾಖಾಧಿಕಾರಿಗಳು ತಡೆಯೊಡ್ಡಿದ ಕಾರಣ ಸಾರ್ವಜನಿಕರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದ ಘಟನೆ ಭಟ್ಕಳದಲ್ಲಿ ನಡೆದಿದೆ. ಇಲ್ಲಿನ ಸ್ಥಳೀಯ ನಿವಾಸಿಯೊಬ್ಬರು ಕಳೆದ 35 ವರ್ಷಗಳಿಂದ ಅಂಗಡಿಯನ್ನು ನಡೆಸುತ್ತಾ ಬಂದಿದ್ದು, ಅವರ ಸಾವಿನ ಬಳಿಕ ಈ ಅಂಗಡಿ ಅವರ ಪತ್ನಿಯ ಹೆಸರಿನಲ್ಲಿತ್ತು.

ಹಲವು ದಿನಗಳಿಂದ ಮುಚ್ಚಿದ್ದ ಅಂಗಡಿಯ ಮೇಲ್ಛಾವಣಿ ರಿಪೇರಿಗೆಂದು ಶೀಟು ಹಾಕಲು ಅಂಗಡಿ ಮಾಲಕರು ಮುಂದಾಗಿದ್ದಾರೆ. ಈ ವೇಳೆ ಯಾರೋ ಕೊಟ್ಟ ಮಾಹಿತಿ ಆಧಾರದಲ್ಲಿ ಸ್ಥಳಕ್ಕೆ ಆಗಮಿಸಿದ ಭಟ್ಕಳ ವಲಯ ಆರ್‌ಎಫ್‌ಒ ಹಾಗೂ ಸಿಬ್ಬಂದಿ, ಅಂಗಡಿ ಜಾಗ ಅರಣ್ಯ ಭೂಮಿಗೆ ಸೇರಿದ್ದು ಎಂದು ಹೇಳಿ ಅಂಗಡಿಗೆ ಹಾಕಲಾಗಿದ್ದ ಶೀಟನಿ ತೆರವಿಗೆ ಮುಂದಾಗಿದ್ದಾರೆ.

ಅರಣ್ಯ ಅಧಿಕಾರಿಗಳು ನಡೆಸುತ್ತಿದ್ದ ಕೆಲಸವನ್ನು ವಿಡಿಯೋ ಮಾಡುತ್ತಿದ್ದ ಸ್ಥಳೀಯರಿಗೆ ಏಕವಚನದಿಂದ ದಬಾಯಿಸಿದ್ದಲ್ಲದೇ, ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದೀರಿ ಎಂದು ವಾಗ್ವಾದಕ್ಕಿಳಿದಿದ್ದಾರೆ. ಸ್ಥಳೀಯರು ಈ ಬಗ್ಗೆ ದೂರು ನೀಡೋದಾಗಿ ಹೇಳಿದಾಗ ಏನ್ ಮಾಡ್ಕೋತ್ತೀರಾ ಮಾಡ್ಕೊಳ್ಳಿ ಹೋಗಿ ಎಂದು ಅಧಿಕಾರಿ ಆವಾಜ್ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆಯ ಮಾಹಿತಿ ಪಡೆದು ದಿವಂಗತ ಶನಿಯಾರ ನಾಯ್ಕ ಅವರ ಪತ್ನಿ ಅಸ್ವಸ್ಥಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಹರಿದಾಡುತ್ತಿದ್ದು, ಅಧಿಕಾರಿಗಳು ದರ್ಪ ತೋರಿಸುತ್ತಿದ್ದಾರೆಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಘಟನೆ ನಡೆದಿರೋದು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version