ಸ್ಕೂಟಿಗೆ ಮುಂಬದಿಯಿಂದ ಡಿಕ್ಕಿ ಡಿಕ್ಕಿಹೊಡೆದ ಲಾರಿ: ಸ್ಥಳದಲ್ಲೇ ಸ್ಕೂಟಿ ಚಾಲಕ ಸಾವು: ಹಿಂಬದಿಯ ಸವಾರ ಗಂಭೀರ

ಯಲ್ಲಾಪುರ: ಲಾರಿ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ, ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನೊರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿವೇಗವಾಗಿ ಲಾರಿ ಚಲಾಯಿಸಿಕೊಂಡು ಬಂದ ಲಾರಿ ಚಾಲಕ, ಸ್ಕೂಟಿಗೆ ಮುಂಬದಿಯಿಂದ ಡಿಕ್ಕಿಹೊಡೆದಿದ್ದಾನೆ. ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಹೌದು, ಈ ಘಟನೆ ನಡೆದಿರೋದು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಅರತಿಬೈಲ್ ಘಟ್ಟದ ಕಣ್ಣಿಮನೆ ಕ್ರಾಸ್ ಬಳಿ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಲಾರಿ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕ ಫೈರೋಜ್ ಇಸ್ಮಾಯಿಲ್ ಶೇಖ್, ಯಲ್ಲಾಪುರದಿಂದ ಅಂಕೋಲಾ ಕಡೆಗೆ ಚಲಿಸುತ್ತಿದ್ದ ಸ್ಕೂಟಿಗೆ ಮುಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಯಲ್ಲಾಪುರದ ವಲಿಷಾಗಲ್ಲಿಯ ಸ್ಕೂಟಿ ಚಾಲಕ ದುಂಡು ಲಕ್ಷö್ಮಣ ಗೋಂದಳಿ (49) ತಲೆಗೆ ತೀವ್ರ ಗಾಯವಾದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version