ಪ್ರವಾಸಕ್ಕೆ ಬಂದು ಮೈಮರೆತರು:ಅಲೆಗೆ ಕೊಚ್ಚಿ ಹೋಗುತ್ತಿದ್ದ ಆರು ಮಕ್ಕಳು: ಕೊನೆಗೂ ಬದುಕಿದ ಆರು ಮಕ್ಕಳು
ಕಾರವಾರ: ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಮುಳುಗುತ್ತಿದ್ದ ಆರು ಮಕ್ಕಳನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಕಾರವಾರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಪ್ರವಾಸಕ್ಕೆ ಆಗಮಿಸಿದ್ದ 13 ಮಂದಿ ಪೈಕಿ ಒಂದೇ ಕುಟುಂಬದ 4 ಮಕ್ಕಳು ಸೇರಿ ಒಟ್ಟು ಆರು ಮಕ್ಕಳು ವಾಟರ್ ಸ್ಪೋರ್ಟ್ಸ್ ಮುಗಿಸಿಕೊಂಡು ಕಡಲತೀರದಲ್ಲಿ ಆಟ ತೊಡಗಿದ್ದರು. ಈ ವೇಳೆ ಪಾಲಕರಿಗೆ ವಾಟರ್ಸ್ ಸ್ಪೋರ್ಟ್ಸ್ ಸಿಬ್ಬಂದಿ ಪಾಲಕರಿಗೆ ಮಕ್ಕಳನ್ನು ನೀರಿನಲ್ಲಿ ಮುಂದೆ ಹೋಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದರು.
ಆದರೂ ಮಕ್ಕಳು ಆಟ ಆಡುತ್ತ ಮುಂದೆ ಸಾಗಿದ್ದು, ಒಮ್ಮೆಲೆ ಬಂದ ಅಲೆಯಿಂದ ಎಲ್ಲರೂ ಕೊಚ್ಚಿ ಹೋಗಿದ್ದಾರೆ. ತಕ್ಷಣ ಕುಟುಂಬಸ್ಥರು ಕೂಗಿಕೊಂಡಿದ್ದಾರೆ. ಬಳಿಕ ರಕ್ಷಣೆಗೆ ದಾವಿಸಿದ ಲೈಫ್‌ಗಾರ್ಡ್, ಟೂರಿಸ್ಟ್ ಮಿತ್ರ ಸಿಬ್ಬಂದಿ ಆರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
ಮಕ್ಕಳು ನೀರು ಕುಡಿದಿದ್ದರಿಂದ ಪ್ರಜ್ಞೆ ತಪ್ಪಿದ್ದರು. ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದರಿಂದ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.
ವಿಸ್ಮಯ ನ್ಯೂಸ್ ಕಾರವಾರ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581