ಕುಮಟಾ: ಇಲ್ಲಿನ ಆಸ್ಪತ್ರೆಯಲ್ಲಿ ಗರ್ಭಿಣಿಯೋರ್ವಳು ತ್ರಿವಳಿ ಶಿಶುಗಳಿಗೆ ಜನ್ಮನೀಡಿದ್ದಾಳೆ. ತಾಯಿ, ಮಕ್ಕಳು ಸುರಕ್ಷಿತವಾಗಿದ್ದಾರೆ.
ತ್ರಿವಳಿ ಶಿಶುಗಳಿಗೆ ಜನ್ಮ ನೀಡಿದವರು ಕುಮಟಾ ತಾಲೂಕಿನ ಗೋಕರ್ಣದ ಗಂಗಾವಳಿ ನಿವಾಸಿ 24 ವರ್ಷದ ಹಲೀಮಾ ಸಾದಿಕ್ ಸಾಬ್. ಇವರಿಗೆ ಸಡನ್ ಆಗಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು.
ಗರ್ಭಿಣಿಯನ್ನು ಪರೀಕ್ಷಿಸಿದ ಡಾ ಪ್ರಶಾಂತ ಮಣಕಿಕರ್ ಅವರು ನಾರ್ಮಲ್ ಹೆರಿಗೆ ಮಾಡಿಸಲು ಮುಂದಾಗಿದ್ದಾರೆ. ಸುರಕ್ಷಿತ ಹಾಗು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.
ಹಲೀಮಾ ಸಾದಿಕ್ ಸಾಬ್ ಅವರು ಎರಡು ಹೆಣ್ಣು ಮತ್ತು ಒಂದು ಗಂಡು ಮಗುವಿಗೆ ಜನ್ಮನೀಡಿದ್ದಾರೆ.
ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಆದರೂ ಚಿಕ್ಕ ಶಿಶುಗಳ ಆರೋಗ್ಯದ ಸುರಕ್ಷತಾ ದೃಷ್ಠಿಯಿಂದ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಶಿಶುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಸ್ಮಯ ನ್ಯೂಸ್ ಕುಮಟಾ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581