Follow Us On

WhatsApp Group
Focus News
Trending

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಮಿರ್ಜಾನಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಪೋಷಣ್ ಅಭಿಯಾನ ಉದ್ಘಾಟನೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನಿನಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶ್ರೀ ಬಿ. ಸಿ. ನಾಗೇಶ್ ರವರು ಭೇಟಿ ನೀಡಿ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರು ಸಚಿವರಿಗೆ ಮತ್ತು ಶಾಸಕರಿಗೆ ಶಾಲು ಹೊದಿಸಿ ಸನ್ಮಾನಿಸಿದರು.

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ , ಬಿಜಿಎಸ್ ಕೇಂದ್ರೀಯ ವಿದ್ಯಾಲಯ ಮಿರ್ಜಾನ್, ಕುಮಟಾದಲ್ಲಿ ಪೋಷಣ್ ಅಭಿಯಾನವನ್ನು ಸಚಿವರು ಉದ್ಘಾಟಿಸಿದರು . ಈ ವೇಳೆ ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು ಪೌಷ್ಟಿಕ ಆಹಾರವನ್ನು ತಯಾರಿಸಿ ಪ್ರದರ್ಶಿಸಿ, ಗಮನಸೆಳೆದರು. ಈ ವೇಳೆ ಮಾತನಾಡಿದ ಸಚಿವರು ಪೋಷಣ್ ಅಭಿಯಾನದ ಮೂಲಕ ಎಲ್ಲರಲ್ಲೂ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು. ವಿದ್ಯಾರ್ಥಿಗಳು ತಯಾರಿಸಿದ ಪೌಷ್ಟಿಕ ಆಹಾರದ ಪ್ರದಶರ್ನ ವೀಕ್ಷಿಸಿ, ವಿದ್ಯಾರ್ಥಿಗಳನ್ನು ಪ್ರೀತಿಯಿಂದ ಮಾತನಾಡಿಸಿ ಪ್ರೋತ್ಸಾಹಿಸಿದರು.

ಇದೇ ಸಂದರ್ಭದಲ್ಲಿ ಕುಮಟಾ-ಹೊನ್ನಾವರ ಶಾಸಕರಾದ ದಿನಕರ ಕೆ. ಶೆಟ್ಟಿ, ಡಿಡಿಪಿಆಯ್ ಹರೀಶ ಗಾಂವಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಾಜೇಂದ್ರ ಎಲ್. ಭಟ್, ಕುಮಟಾ ಪಿಎಸ್ ಐ ಆನಂದ ಮೂರ್ತಿ ಮತ್ತು ಆರಕ್ಷಕ ಸಿಬ್ಬಂದಿಗಳು, ಅಧಿಕಾರಿಗಳು, ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಲೀನಾ ಗೊನೆಹಳ್ಳಿ, ಪಿಆರ್‌ಓ ರಜತ್ ಕೆ., ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಹಾಜರಿದ್ದರು.

ವಿಸ್ಮಯ ನ್ಯೂಸ್, ಕುಮಟಾ

Back to top button