ಮಳೆಯಿಂದಾಗಿ ಕುಸಿದುಬಿದ್ದಿದೆ ಮನೆಯ ಗೋಡೆ: ಪರಿಹಾರಕ್ಕೆ ಮಹಿಳೆಯ ಮನವಿ

ಯಲ್ಲಾಪುರ: ಕಳೆದ ತಿಂಗಳು ಸುರಿದ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಬಿದ್ದು ಹಾನಿಯಾಧ ಘಟನೆ ತಾಲೂಕಿನ ಕಣ್ಣಿಗೇರಿ ಪಂಚಾಯಿತಿ ವ್ಯಾಪ್ತಿಯ ಕೋಳಿಕೆರೆ ಗ್ರಾಮದಲ್ಲಿ ನಡೆದಿದೆ. ಹೀಗಾಗಿ ಸೂಕ್ತ ಪರಿಹಾರ ಕೊಡಿಸುವಂತೆ ಕೋಳಿಕೆರೆ ನಿವಾಸಿ ಮೇಘಾ ಹರಿಜನ ತಹಶೀಲ್ದಾರರಿಗೆ ಮನವಿ ನೀಡಿ ಆಗ್ರಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸುರಿದ ಭಾರಿ ಮಳೆಯಲ್ಲಿ ತಮ್ಮ ಮನೆಯ ಗೋಡೆಗಳು ಬಿರುಕು ಬಿಟ್ಟಿದೆ.

ಒದ್ದೆಯಾದ ಮನೆಯ ಮುಂದಿನ ಭಾಗದ ಗೋಡೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಅಲ್ಲದೇ ಮನೆಯ ಇನ್ನೊಂದು ಬದಿಯ ಗೋಡೆ ಸಂಪೂರ್ಣವಾಗಿ ಬಿರುಕು ಬಿಟ್ಟು ಆಗಲೋ ಈಗಲೋ ಕುಸಿದು ಬೀಳುವ ಹಂತಕ್ಕೆ ತಲುಪಿದೆ ಮಹಿಳೆ ಎಂದು ಮನವಿಯಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ನನ್ನ ಪತಿ ಕೂಲಿ ಕೆಲಸವನ್ನು ಮಾಡಿಕೊಂಡು ಅದರಿಂದ ಬರುವ ಆದಾಯದಲ್ಲಿ ಕುಟುಂಬ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದೆವೆ. ಈಗ ಬಿದ್ದಿರುವ ಗೋಡೆಯ ದುರಸ್ತಿ ಹಾಗೂ ಬೀಳಲಿರುವ ಗೋಡೆಯ ಮರು ನಿರ್ಮಾಣ ಮಾಡಬೇಕಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version